ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ 9ನೇ ಮೈಲಿ ಕಲ್ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ. ಛತ್ತೀಸ್ಗಢ ಮೂಲದ ಕಾರ್ಮಿಕ ಮಹಿಳೆ ಹಾವು ಕಚ್ಚಿದ ಪರಿಣಾಮ ಮೃತಪಟ್ಟಿದ್ದಾರೆ.
ಮೃತ ಮಹಿಳೆಯನ್ನು ಜಾಲ್ ಬಾಯಿ ಸಿಧಾರ್ (42) ಎಂದು ಗುರುತಿಸಲಾಗಿದೆ. ಅವರು ತಮ್ಮ ಕುಟುಂಬದೊಂದಿಗೆ ಕಳೆದ ಕೆಲವು ದಿನಗಳಿಂದ AKC ಸಿಮೆಂಟ್ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.
ನಿನ್ನೆ ರಾತ್ರಿ ಮಲಗಿದ್ದ ವೇಳೆ ಮಹಿಳೆಯ ಕಾಲಿಗೆ ಹಾವು ಕಚ್ಚಿದೆ. ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಈ ಘಟನೆ ಸಿಂಗಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
















Leave a Reply