ಚನ್ನಗಿರಿ ಪೊಲೀಸ್ ಠಾಣೆಗೆ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ರಘುಪತಿ ಭಟ್ ಭೇಟಿ
1 min read
ದುಷ್ಕರ್ಮಿಗಳ ದಾಳಿಗೆ ಒಳಗಾಗಿದ್ದ ಚನ್ನಗಿರಿ ಪೊಲೀಸ್ ಠಾಣೆಗೆ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿ ರಘುಪತಿ ಭಟ್ ಭೇಟಿ ನೀಡಿ ಘಟನೆಯಲ್ಲಿ ಗಾಯಗೊಂಡ ಪೊಲೀಸರಿಗೆ ಸಾಂತ್ವನ ಹೇಳಿ ನೈತಿಕ ಸ್ಥೈರ್ಯ ತುಂಬಿದರು.
ಕಲ್ಲು ತೂರಾಟ ನಡೆಸಿ, ಪೊಲೀಸ್ ವಾಹನಗಳನ್ನು ಜಖಂಗೊಳಿಸಲಾದ ದಾವಣಗೆರೆ ಜಿಲ್ಲೆ ಚನ್ನಗಿರಿ ಪೊಲೀಸ್ ಠಾಣೆಗೆ ನೈರುತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಕೆ. ರಘುಪತಿ ಭಟ್ ಭೇಟಿ ನೀಡಿ ಘಟನೆಯ ವಿವರ ಪಡೆದು ಪೊಲೀಸರಿಗೆ ಮಾನಸಿಕ ಸ್ಥೈರ್ಯ ತುಂಬಿದರುಮೇ 24 ರಂದು ಚನ್ನಗಿರಿ ಪೊಲೀಸ್ ಠಾಣೆಗೆ ಉದ್ರಿಕ್ತರ ಗುಂಪು ತಡರಾತ್ರಿ ಕಲ್ಲು ತೂರಾಟ ನಡೆಸಿದ್ದರು. ಇದರಲ್ಲಿ ಕೆಲವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು ಪೊಲೀಸರಿಗೆ ಆತ್ಮಸ್ಥೈರ್ಯ ತುಂಬಿ ದುಷ್ಕೃತ್ಯ ನಡೆಸಿದವರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕಾದ ಸರ್ಕಾರ ಪೊಲೀಸ್ ಅಧಿಕಾರಿಗಳನ್ನೆ ಅಮಾಮತುಗೊಳಿಸಿರುವುದು ಖಂಡನೀಯ ಎಂದು ರಘುಪತಿ ಆಕ್ರೋಶ ವ್ಯಕ್ತಪಡಿಸಿದರು. ಈ ಕೃತ್ಯದಲ್ಲಿ ಭಾಗಿಯಾದ ಎಲ್ಲಾ ದುಷ್ಕೃರ್ಮಿಗಳನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಬೇಕು ಎಂದು ರಘುಪತಿ ಭಟ್ ಒತ್ತಾಯಿಸಿದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g