October 18, 2024

MALNAD TV

HEART OF COFFEE CITY

ಕಡೂರು ಸರ್ಕಾರಿ ನೌಕರರ ಸಂಘ ದಿಂದ ತಹಶಿಲ್ದಾರ್ ಗೆ ಮನವಿ

1 min read

 

ಕಡೂರು ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘ ಪ್ರಮುಖ ಮೂರು ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕೆಂದು ಒತ್ತಾಯಿಸಿ ಸಂಘದ ಅಧ್ಯಕ್ಷ ಅರೇಹಳ್ಳಿ ಎಸ್ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ತಹಸೀಲ್ದಾರ್ ಕಚೇರಿಗೆ ತೆರಳಿದ ನೌಕರ ಸಂಘದ ಪದಾಧಿಕಾರಿಗಳು ಉಪ ತಹಸೀಲ್ದಾರ್ ನಾಗರತ್ನ ಅವರಿಗೆ ಮನವಿ ಸಲ್ಲಿಸಿದರು.
ನೌಕರ ಅಧ್ಯಕ್ಷ ಅರೇಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿ 7ನೇ ವೇತನ ಆಯೋಗವು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದು ಅದನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸಬೇಕು. ಜೊತೆಗೆ
ಎನ್‌ಪಿಎಸ್ ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ನೌಕರರ ಜೀವನ ನಿರ್ವಹಣೆ ಹಾಗೂ ನಿವೃತ್ತಿಯ ನಂತರ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್‌ಪಿಎಸ್ ನೌಕರರನ್ನು ಒಪಿಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಬ್ದಾರಿಯಾಗಿದೆ. ಈಗಾಗಲೇ ರಾಜಸ್ಥಾನ,ಪಂಜಾಬ್ ಸೇರಿದಂತೆ ಅನೇಕ ರಾಜ್ಯದಲ್ಲಿ ಹಳೆ ಪಿಂಚಣಿ ಜಾರಿಗೆ ತಂದಿರುವಂತೆ ಸರ್ಕಾರ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಯೋಜನೆ ಜಾರಿಗೊಳಿಸಲಿ ಎಂದರು.
ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸಿ ನೌಕರರ ಕುಟುಂಬ ಅವಲಂಭಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಘೋಷಿಸಬೇಕೆಂದು ಸಹಾ ಒತ್ತಾಯ ಮಾಡಿದರು. ರಾಜ್ಯ ಸರ್ಕಾರದ ಮುಂದಿರುವ ೩ ನ್ಯಾಯಯುತ ಬೇಡಿಕೆಗಳನ್ನು ಜಾರಿಗೊಳಿಸುವಲ್ಲಿ ವಿಳಂಬವಾಗುತ್ತಿದ್ದು ಶೀಘ್ರವೇ ಸರ್ಕಾರ ಆದೇಶ ನೀಡಬೇಕು ಎಂದು ನೌಕರ ಸಂಘದ ಸದಸ್ಯರು ಒತ್ತಾಯಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!