ಹೊರನಾಡು ಸಂಪರ್ಕಿಸುವ ಹೆಬ್ಬಾಳ ಸೇತುವೆ ಮುಳುಗಡೆ : ಸಂಚಾರ ಬಂದ್
1 min read
ಆದಿಶಕ್ತಿ ಅನ್ನಪೂರ್ಣೇಶ್ವರಿ ದೇಗುವ ಸಂಪರ್ಕಿಸುವ ಹೊರನಾಡಿಗೆ ಕಳಸ ಮೂಲಕ ತೆರಳುವ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಪೊಲೀಸರು ಎರಡೂ ಕಡೆ ಬ್ಯಾರಿಕೇಡ್ ಹಾಕಿ ವಾಹನ ಸಂಚಾರ ನಿರ್ಬಂಧಿಸಿದ್ದಾರೆ
ಚಿಕ್ಕಮಗಳೂರಿನ ಪಶ್ಚಿಮಘಟ್ಟಗಳ ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು
ಅಪಾಯ ಮಟ್ಟ ಮೀರಿದ ಭದ್ರಾ ನದಿ ಹರಿಯುತ್ತಿದೆ. ಈ ಬಾರಿಯ ಮಳೆಗಾಲದಲ್ಲಿ ಮೊದಲ ಸಲ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಭದ್ರಾ ನದಿ ಅಬ್ಬರಕ್ಕೆ ಹೆಬ್ಬಾಳ ಸೇತುವೆ ಜಲಾವೃತವಾಗಿದೆ. ಕಳಸ ತಾಲೂಕಿನ ಹೊರನಾಡು ಬಳಿಯ ಹೆಬ್ಬಾಳೆ ಸೇತುವೆ ಮುಳುಗಡೆಯಿಂದಾಗಿ ಹೊರನಾಡು-ಕಳಸ ಸಂಪರ್ಕ ಕಡಿತ ವಾದಂತಾಗಿದೆ. ರಾತ್ರಿಯಿಂದಲೂ ಸೇತುವೆಯ ಮೇಲೆ ಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಮುನ್ನೆಚ್ಚರಿ ಕಾರ್ಯಕ್ರಮವಾಗಿ ಸೇತುವೆಯ ಎರಡು ಕಡೆ ಬ್ಯಾರಿಕೇಡ್ ಹಾಕಲಾಗಿದ್ದು ಸೇತುವೆಯ ಮೇಲೆ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ ಸೇತುವೆ ಬಳಿ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g