October 18, 2024

MALNAD TV

HEART OF COFFEE CITY

ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ ನಾಳೆಯೂ ಶಾಲೆಗಳಿಗೆ ರಜೆ

1 min read

 

 

ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಸುರಿಯುವ ನಿರೀಕ್ಷೆ ಇದ್ದು ಮಲೆನಾಡಿನ ಐದು ತಾಲೂಕು ಗಳಿಗೆ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಿಕ್ಕಮಗಳೂರು ನಗರ ಲಕ್ಯಾ ಅಂಬಳೆ ಹೋಬಳಿಗಳಿಗೆ ರಜೆ ಇರುವುದಿಲ್ಲ. 

 

ಕಾಫಿನಾಡಲ್ಲಿ ಮಳೆ ಅಬ್ಬರ ಮುಂದುವರಿದಿದ್ದು ಮಲೆನಾಡ ಐದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ

ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದ್ದು, ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿಲಾಗಿದೆ. ಆದರೆ ಚಿಕ್ಕಮಗಳೂರು ತಾಲೂಕಿನಲ್ಲಿ ಗ್ರಾಮೀಣ ಭಾಗಕ್ಕೆ ಮಾತ್ರ ರಜೆ ಕೊಟ್ಟಿದ್ದು ಚಿಕ್ಕಮಗಳೂರು ನಗರ ಅಂಬಳೆ, ಲಕ್ಯಾ ಹೋಬಳಿಗೆ ರಜೆ ಕೊಟ್ಟಿಲ್ಲ. ದಿನಾಂಕ 19 ರ ಶುಕ್ರವಾರವೂ ಒಂದು ದಿನಕ್ಕೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!