September 19, 2024

MALNAD TV

HEART OF COFFEE CITY

ಅಕ್ರಮ ಹೋಮ್ ಸ್ಟೇ, ರೆಸಾರ್ಟ್ ನೆಲಸಮಕ್ಕೆ ಅರಣ್ಯ ಇಲಾಖೆ ದಿಟ್ಟ ಹೆಜ್ಜೆ

1 min read

 

 

ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಕಟ್ಟಿರುವ ಹೋಂ ಸ್ಟೇ, ರೆಸಾರ್ಟ್ ಗಳಿಗೆ ಚಳಿ ಬಿಡಿಸಲು ಅರಣ್ಯ ಇಲಾಖೆ ಕೊನೆಗೂ ಸಜ್ಜಾಗಿದೆ. ಸಚಿವ ಖಂಡ್ರೆ ಖಡಕ್ ಆದೇಶದ ನಂತರ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ದಾಖಲೆ ಇಲ್ಲದೇ ಕಟ್ಟಿರುವ ಹೋಂ ಸ್ಟೇಗಳನ್ನು ಹುಡುಕಿ ಹುಡುಕಿ ನೋಟೀಸ್ ನೀಡಿದೆ. 

 

ಜಿಲ್ಲೆಯಲ್ಲಿ ನಾಯಿ ಕೊಡೆಗಳಂತೆ ತಲೆ ಎತ್ತಿರುವ ಅಕ್ರಮ ರೆಸಾರ್ಟ್ ಹಾಗೂ ಹೋಮ್ ಸ್ಟೇ ಗಳ ವಿಷಯದಲ್ಲಿ ಅರಣ್ಯ ಸಚಿವರ ಖಡಕ್ ಆದೇಶದ ಬೆನ್ನಲ್ಲೆ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ

ಅರಣ್ಯ ಪ್ರದೇಶ, ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯ ಜನರಿಗೆ ನೋಟೀಸ್ ನೀಡಲಾಗಿದೆ. ಅದರಲ್ಲೂ ಹೋಂ ಸ್ಟೇ, ರೆಸಾರ್ಟ್ ಮಾಲೀಕರಿಗೆ ಅರಣ್ಯ ಇಲಾಖೆಯಿಂದ ಬಿಸಿ ಮುಟ್ಟಿ ಸಿದೆ. ಅರಣ್ಯ ವ್ಯಾಪ್ತಿಯ ಒಳಗೆ ರೆಸಾರ್ಟ್, ಹೋಂ ಸ್ಟೇ ನಿರ್ಮಾಣದ ಬಗ್ಗೆ ಸಂಶಯಗೊಂಡು ನೋಟಿಸ್ ನೀಡಲಾಗಿದೆ. ಸುಮಾರು 40 ಜನ ರೆಸಾರ್ಟ್, ಹೋಂಸ್ಟೇ ಮಾಲೀಕರಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿದೆ

ಸೂಕ್ತ ದಾಖಲೆಗಳನ್ನು ಹಾಜರು ಪಡಿಸುವಂತೆ ಅದರಲ್ಲಿ ತಿಳಿಸಲಾಗಿದೆ. ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಹೋಂ ಸ್ಟೇ, ರೆಸಾರ್ಟ್ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದರು. ಈ ಆದೇಶದನ್ವಯ ನೋಟಿಸ್ ನೀಡಿ ಸೂಕ್ತ ದಾಖಲೆ ಕೇಳಿರುವ ಅರಣ್ಯ ಇಲಾಖೆ ಜಿಲ್ಲೆಯ

ಮೂಡಿಗೆರೆ, ಮುತ್ತೋಡಿ, ಮುಳ್ಳಯ್ಯನಗಿರಿ, ಚಿಕ್ಕಮಗಳೂರು ಭಾಗದ ರೆಸಾರ್ಟ್, ಹೋಮ್ ಸ್ಟೇ ಮಾಲೀಕರಿಗೆ ನೋಟೀಸ್ ಕೊಟ್ಟಿದೆ. 

ಒಂದು ವಾರದ ಒಳಗೆ ಸೂಕ್ತ ದಾಖಲೆ ನೀಡುವಂತೆ ನೋಟಿಸ್ ನಲ್ಲಿ ಹೇಳಲಾಗಿದೆ. 

ಚಿಕ್ಕಮಗಳೂರು ಡಿ.ಎಫ್.ಓ ರಮೇಶ್ ಬಾಬುರಿಂದ ಎಲ್ಲರಿಗೂ ನೋಟಿಸ್ ನೀಡಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!