September 20, 2024

MALNAD TV

HEART OF COFFEE CITY

ಜಯಪುರ ಬಿಜಿಎಸ್ ಪದವಿ ಪೂರ್ವ ಕಾಲೇಜಿನ 4 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

1 min read

ಸೆಪ್ಟೆಂಬರ್ ತಿಂಗಳ 13 ಮತ್ತು14 ರಂದು ಚಿಕ್ಕಮಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಿಜಿಎಸ್ ಜಯಪುರ ಪದವಿ ಪೂರ್ವ ಕಾಲೇಜಿನ ಕಲಾವಿ ಭಾಗದ ವಿದ್ಯಾರ್ಥಿಗಳಾದ ತೇಜಸ್ ಎ ರಾವ್ ಗುಂಡು ಎಸೆತದಲ್ಲಿ ಪ್ರಥಮ ಹಾಗು ಚಕ್ರಎಸೆತದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಇದೇ ಕಾಲೇಜಿನ ಸಾನಿಕ ಎಸ್ ಗುಡ್ಡಗಾಡು ಓಟದಲ್ಲಿ ಮತ್ತು ಕೀರ್ತನಾ ಹರ್ಡಲ್ಸ್ ನಲ್ಲಿ ದ್ವಿತೀಯ ಸ್ಥಾನ ಹಾಗೂ ತ್ರಿಷಾ ಜೈನ್ ಟೆನಿಕಾಯಿಟ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 

ಕ್ರೀಡಾಕೂಟದಲ್ಲಿ ಭಾಗವಹಿಸಿದ ಹಾಗೂ ಬಹುಮಾನಗಳನ್ನು ಗಳಿಸಿರುವ ವಿಜೇತರಿಗೆ ಪೂಜ್ಯ ಶ್ರೀ ಶ್ರೀ ಗುಣನಾಥ ಸ್ವಾಮೀಜಿಯವರು, ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು ಕ್ರೀಡಾ ಕಾರ್ಯದರ್ಶಿ ಹಾಗೂ ಎಲ್ಲಾ ಉಪನ್ಯಾಸಕ ವೃಂದದವರು ಅಭಿನಂದಿಸಿರುತ್ತಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!