ಕನ್ನಡ ಭಾಷೆ ಉಳಿಸಿ-ಬೆಳೆಸಲು ‘ನಮ್ಮ ಕರ್ನಾಟಕ ರಕ್ಷಣಾ ವೇದಿಕೆ’ ಅಸ್ತಿತ್ವಕ್ಕೆ
1 min readಕನ್ನಡ ನೆಲ-ಜಲ, ನಾಡು-ನುಡಿ, ಭಾಷೆ ಉಳಿಸಿ ಬೆಳೆಸುವುದು ಹೋರಾಟಕ್ಕೆ ಸಜ್ಜಾಗಲು ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಅಸ್ತಿತ್ವಕ್ಕೆ ಬಂದಿದೆ ಎಂದು ವೇದಿಕೆಯ ನೂತನ ಅಧ್ಯಕ್ಷ ಅಗ್ನಿ ಸುಮಂತ್ ತಿಳಿಸಿದರು.
ಅವರು ಇಂದು ರತ್ನಗಿರಿ ರಸ್ತೆಯ ಜಾನಕಿ ಸಭಾ ಭವನದಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಏರ್ಪಡಿಸಲಾಗಿದ್ದ ವೇದಿಕೆಯ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಅಧಿಕಾರ ಸ್ವೀಕರಿಸಿ ಮಾತನಾಡಿದರು. ಪ್ರಸ್ತುತ ಕನ್ನಡ ಭಾಷೆ ಇಂಗ್ಲಿಷ್ ವ್ಯಾಮೋಹದಿಂದಾಗಿ ಬಳಕೆಯಾಗುತ್ತಿಲ್ಲ, ಈ ನಿಟ್ಟಿನಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸುವಂತೆ ಒತ್ತಾಯಿಸಲು ವೇದಿಕೆ ನಿರಂತರವಾಗಿ ಹೋರಾಟ ನಡೆಸುತ್ತದೆ ಎಂದು ಹೇಳಿದರು. ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ವೇದಿಕೆಯ ನೂತನ ಘಟಕಗಳನ್ನು ಸ್ಥಾಪನೆ ಮಾಡಲಾಗುವುದು, ಜೊತೆಗೆ ಪದಾಧಿಕಾರಿಗಳನ್ನು ನೇಮಿಸಿ ಕನ್ನಡ ಭಾಷೆಗೆ ಅನ್ಯಾಯವಾಗದಂತೆ ಸೂಕ್ತ ಹೋರಾಟ ನಡೆಸಲು ಕರೆ ನೀಡಲಾಗುವುದೆಂದು ಹೇಳಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ಸಚ್ಚಿದಾನಂದ ನಾಡಿಗ್ ಮಾತನಾಡಿ, ಕನ್ನಡ ಭಾಷೆ ಉಳಿಸಿ ಬೆಳೆಸಲು ಸಂಘದ ಎಲ್ಲಾ ಪದಾಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.ಲಯನ್ ಜಯರಾಜ್ ನಾಯ್ಡುರವರ ಸಾರಥ್ಯದ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಚಿಕ್ಕಮಗಳೂರಿನಲ್ಲಿ ನಾಲ್ಕು ವರ್ಷಗಳ ನಂತರ ಪುನರಾರಂಭಗೊoಡಿದ್ದು, ಕರ್ನಾಟಕದಲ್ಲಿ ಹುಟ್ಟುವುದೇ ಸುವರ್ಣಾವಕಾಶವಾಗಿದೆ, ಹುಟ್ಟೂರಿನ ಋಣ ತೀರಿಸಲು ನಾಡು-ನುಡಿ, ನೆಲ-ಜಲ, ಭಾಷೆಗೆ ಹೋರಾಟ ಮಾಡುವುದು ಅನಿವಾರ್ಯವಾಗಿದೆ ಎಂದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g