ಬಿರುಗಾಳಿ ಅಬ್ಬರ: ಸರ್ಕಾರಿ ಶಾಲೆಯ ಮೇಲ್ಛಾವಣಿ ಧ್ವಂಸ

Spread the love

 

 

ಚಿಕ್ಕಮಗಳೂರು: ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಭೀಕರ ಬಿರುಗಾಳಿಯ ಅಬ್ಬರಕ್ಕೆ ಸರ್ಕಾರಿ ಶಾಲೆಯೊಂದರ ಮೇಲ್ಛಾವಣಿ ಹಾರಿಹೋಗಿದ್ದು, ನೂರಾರು ವಿದ್ಯಾರ್ಥಿಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅನಿರೀಕ್ಷಿತವಾಗಿ ಬೀಸಿದ ಬಿರುಗಾಳಿಗೆ ಶಾಲೆಯ ಸುಮಾರು ಸಾವಿರಕ್ಕೂ ಹೆಚ್ಚು ಹೆಂಚುಗಳು ಗಾಳಿಯಲ್ಲಿ ತೂರಿಬಂದು ನೆಲಕ್ಕೆ ಬಿದ್ದು ಪುಡಿಪುಡಿಯಾಗಿವೆ.

ದೌರ್ಭಾಗ್ಯದ ನಡುವೆಯೂ ಅದೃಷ್ಟವಶಾತ್ ಘಟನೆ ನಡೆದ ಸಮಯದಲ್ಲಿ ಮಕ್ಕಳೆಲ್ಲರೂ ಮಧ್ಯಾಹ್ನದ ಊಟಕ್ಕಾಗಿ ಕೊಠಡಿಗಳಿಂದ ಹೊರಗೆ ಬಂದಿದ್ದರು. ಒಂದು ವೇಳೆ ವಿದ್ಯಾರ್ಥಿಗಳು ತರಗತಿಯ ಒಳಗಿದ್ದಿದ್ದರೆ ದೊಡ್ಡ ಮಟ್ಟದ ಸಾವು-ನೋವು ಸಂಭವಿಸುವ ಸಾಧ್ಯತೆಯಿತ್ತು. ಈ ಘಟನೆಯಲ್ಲಿ ಹಾರಿಬಂದ ಹೆಂಚುಗಳು ತಗುಲಿ ಇಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಮುಕ್ತರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಕುರಿತು ಪರಿಶೀಲನೆ ನಡೆಸಿದ್ದಾರೆ. ಶಾಲಾ ಆವರಣದಲ್ಲಿ ಕೆಲಕಾಲ ಆತಂಕದ ಛಾಯೆ ಆವರಿಸಿತ್ತು.

Leave a Reply

Your email address will not be published. Required fields are marked *