ಶೃಂಗೇರಿ ಕ್ಷೇತ್ರ ಸ್ತಬ್ಧ: ಕಾಡಾನೆ ಹಾವಳಿ ಹಾಗೂ ಲಾಠಿಚಾರ್ಜ್ ಖಂಡಿಸಿ ಇಂದು ಬಂದ್

 

ಚಿಕ್ಕಮಗಳೂರು: ಬಲಿಯಾದ ಪ್ರಕರಣ ಹಾಗೂ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಲಾಠಿಚಾರ್ಜ್ ಖಂಡಿಸಿ ಇಂದು ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಪೂರ್ಣ ಬಂದ್ ಆಚರಿಸಲಾಗುತ್ತಿದೆ.
​ಕಾಫಿನಾಡಿನ ಶೃಂಗೇರಿ, ಎನ್.ಆರ್. ಪುರ, ಕೊಪ್ಪ ತಾಲೂಕುಗಳು ಸೇರಿದಂತೆ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯಲ್ಲಿ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಬಂದ್‌ಗೆ ಕರೆ ನೀಡಲಾಗಿದೆ. ಈ ಹೋರಾಟಕ್ಕೆ ರೈತ ಸಂಘಟನೆಗಳು, ನಾಗರಿಕ ಹಿತರಕ್ಷಣಾ ವೇದಿಕೆ, ರೈತ ಒಕ್ಕೂಟ, ಆಟೋ ಚಾಲಕರು ಹಾಗೂ ಬಿಜೆಪಿ ಬೆಂಬಲ ಸೂಚಿಸಿವೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ವ್ಯಾಪಾರ-ವಹಿವಾಟುಗಳು ಸ್ಥಗಿತಗೊಂಡಿದ್ದು, ಬೆಳಿಗ್ಗೆ 11 ಗಂಟೆಗೆ ಬಾಳೆಹೊನ್ನೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಸರ್ಕಾರದ ವಿರುದ್ಧ ಜನಾಕ್ರೋಶ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಿದೆ.

Leave a Reply

Your email address will not be published. Required fields are marked *