ಯುವಕರ ಆಕ್ರೋಶಕ್ಕೆ ಸರ್ಕಾರ ದಂಗೆ ಎದುರಿಸಬೇಕಾಗುತ್ತದೆ: ಬಿ.ವೈ. ವಿಜಯೇಂದ್ರ ಎಚ್ಚರಿಕೆ

Spread the love

 

 

ಖಾಲಿ ಹುದ್ದೆಗಳ ಭರ್ತಿ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ಯುವ ಸಮೂಹದ ಆಕ್ರೋಶಕ್ಕೆ ಸರ್ಕಾರ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಇಂದು ಅದೇ ಸಮುದಾಯಗಳಿಗೆ ದ್ರೋಹ ಎಸಗುತ್ತಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಸುಮಾರು 2.80 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ ಎಂದು ಅಂಕಿಅಂಶ ನೀಡಿದ ವಿಜಯೇಂದ್ರ, ಈ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಯುವಕರ ಮೇಲೆ ಲಾಠಿ ಚಾರ್ಜ್ ಮಾಡಿಸಿರುವುದು ಸರ್ಕಾರದ ದಮನಕಾರಿ ನೀತಿಯನ್ನು ಎತ್ತಿ ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತ ರೈತರು ಹತಾಶರಾಗಿದ್ದಾರೆ ಮತ್ತು ಯುವಜನತೆ ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದ ಅವರು, ಯುವಕರ ಬೇಡಿಕೆಗಳನ್ನು ಇದೇ ರೀತಿ ನಿರ್ಲಕ್ಷಿಸಿದರೆ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ದಂಗೆ ಏಳುವುದು ಖಚಿತ ಎಂದು ಗುಡುಗಿದ್ದಾರೆ.

Leave a Reply

Your email address will not be published. Required fields are marked *