ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಘಟಕದಲ್ಲಿ ಮಹತ್ವದ ಶಿಸ್ತು ಕ್ರಮ ಜರುಗಿಸಲಾಗಿದ್ದು, ಅಸಭ್ಯ ವರ್ತನೆಯ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಹಿಲ್ ಶರೀಫ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ರಾಹಿಲ್ ಶರೀಫ್ ಅವರು ಸಾರ್ವಜನಿಕವಾಗಿ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದಿದ್ದವು. ಈ ವರ್ತನೆಗಳ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವುದು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದೆ ಎಂದು ಪರಿಗಣಿಸಿರುವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಾ. ಕೆ.ಪಿ. ಅಂಶುಮಂತ್ ಅವರು ಈ ಅಧಿಕೃತ ಆದೇಶ ಹೊರಡಿಸಿದ್ದಾರೆ. ಇಂತಹ ನಡವಳಿಕೆಗಳಿಂದ ಕಾಂಗ್ರೆಸ್ ಪಕ್ಷ ಮತ್ತು ಸಂಘಟನೆಗೆ ಮುಜುಗರ ಉಂಟಾಗಿರುವ ಕಾರಣ, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.













Leave a Reply