ಚಿಕ್ಕಮಗಳೂರು: ರಾಜ್ಯಾದ್ಯಂತ ಇಂದು ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳಲ್ಲಿ ಉತ್ಸಾಹ ಹಾಗೂ ಕಾತರ ಹೆಚ್ಚಾಗಿದೆ.
ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಬೆಳಗ್ಗಿನಿಂದಲೇ ಆಗಮಿಸಿದ್ದು, ಅಂತಿಮ ತಯಾರಿಯಲ್ಲಿ ತೊಡಗಿರುವ ದೃಶ್ಯಗಳು ಕಂಡುಬಂದವು. ಕೆಲವರು ಪುಸ್ತಕಗಳನ್ನು ಓದುತ್ತಾ, ಇನ್ನು ಕೆಲವರು ಸ್ನೇಹಿತರೊಂದಿಗೆ ಚರ್ಚೆ ನಡೆಸುತ್ತಾ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುತ್ತಿರುವುದು ಗಮನಾರ್ಹವಾಗಿದೆ.
ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾ ಖಜಾನೆಯಿಂದ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳನ್ನು ಸುರಕ್ಷಿತವಾಗಿ ರವಾನೆ ಮಾಡಲಾಗಿದೆ.
ಇದಲ್ಲದೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ತಡೆಹಿಡಿಯಲಾಗಿದೆ. ಶಾಂತಿ ಮತ್ತು ಶಿಸ್ತು ಕಾಪಾಡಲು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.













Leave a Reply