ಕೊಪ್ಪ : ತಾಲೂಕಿನ ಮುಂಡೋಳಲು ಗ್ರಾಮದಲ್ಲಿ ಕಾಡುಕೋಣದ ದಾಳಿಗೆ ತುತ್ತಾಗಿ ಆಸ್ಪತ್ರೆ ಸೇರಿರುವ ಶಿವಪ್ಪ ಅವರ ಆರೋಗ್ಯ ಸ್ಥಿತಿಯನ್ನು ಮಾಜಿ ಸಚಿವ ಡಿ.ಎನ್. ಜೀವರಾಜ್ ಅವರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಪ್ಪ ಅವರಿಗೆ ಧೈರ್ಯ ತುಂಬಿದ ಅವರು, ವೈದ್ಯರೊಂದಿಗೆ ಚರ್ಚಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ತಿಳಿಸಿದರು. ಈ ಸಂಕಷ್ಟದ ಸಮಯದಲ್ಲಿ ಕುಟುಂಬದವರೊಂದಿಗೆ ನಾವಿದ್ದೇವೆ ಎಂಬ ಭರವಸೆ ನೀಡಿದ ಮಾಜಿ ಸಚಿವರು, ಗಾಯಾಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದರು.
ಇದೇ ವೇಳೆ ಘಟನೆಯ ತೀವ್ರತೆಯನ್ನು ಕಂಡು ಆಕ್ರೋಶ ವ್ಯಕ್ತಪಡಿಸಿದ ಡಿ.ಎನ್. ಜೀವರಾಜ್, ಕೂಡಲೇ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ (DFO) ಕರೆ ಮಾಡಿ ಅಧಿಕಾರಿಗಳ ವಿಳಂಬ ಧೋರಣೆಯನ್ನು ಖಂಡಿಸಿದರು. ಮಲೆನಾಡು ಭಾಗದಲ್ಲಿ ಕಾಡುಪ್ರಾಣಿಗಳ ಉಪಟಳ ಮಿತಿಮೀರಿದ್ದು, ಜನರು ತೋಟ-ಗದ್ದೆಗಳಿಗೆ ಹೋಗಲು ಭಯಪಡುವಂತಾಗಿದೆ ಎಂದು ಅಧಿಕಾರಿಗಳ ಗಮನ ಸೆಳೆದರು. ದಾಳಿಗೆ ಒಳಗಾದ ಶಿವಪ್ಪ ಅವರಿಗೆ ಅರಣ್ಯ ಇಲಾಖೆಯಿಂದ ಸಿಗಬೇಕಾದ ಗರಿಷ್ಠ ಪರಿಹಾರವನ್ನು ಯಾವುದೇ ವಿಳಂಬವಿಲ್ಲದೆ ತಕ್ಷಣವೇ ಮಂಜೂರು ಮಾಡಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು
















Leave a Reply