ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಜಲಪಾತದ ಬಳಿ ಕೇರಳ ಮೂಲದ ಬಾಲಕಿ ಶ್ರೀನಂದಾ ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ತುರ್ತು ರಕ್ಷಣಾ ಕಾರ್ಯಾಚರಣೆಗೆ ಸೂಚನೆ ನೀಡಿದ್ದಾರೆ. ಪಾಲಕಾಡ್ ಜಿಲ್ಲೆಯ ಈ ಬಾಲಕಿಯ ಪತ್ತೆಗಾಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡುವಂತೆ ಅರಣ್ಯ ಇಲಾಖೆಯ ನುರಿತ ಸಿಬ್ಬಂದಿಗೆ ಸಚಿವರು ಆದೇಶಿಸಿದ್ದಾರೆ. ಈ ಪ್ರದೇಶವು ಅರಣ್ಯ ಇಲಾಖೆಯ ನೇರ ವ್ಯಾಪ್ತಿಗೆ ಬರದಿದ್ದರೂ ಸಹ, ಅಲ್ಲಿನ ಭೌಗೋಳಿಕ ಪರಿಸ್ಥಿತಿ ಕಡಿದಾದ ಗುಡ್ಡಗಳು ಮತ್ತು ದಟ್ಟವಾದ ಕಾಡಿನಿಂದ ಕೂಡಿರುವುದರಿಂದ ಮಾನವೀಯ ನೆಲೆಯಲ್ಲಿ ಇಲಾಖೆಯ ನೆರವು ಅಗತ್ಯವೆಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಶೋಧ ಕಾರ್ಯವನ್ನು ತೀವ್ರಗೊಳಿಸಲು ಥರ್ಮಲ್ ಡ್ರೋನ್ಗಳಂತಹ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳುವಂತೆ ಮತ್ತು ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಬಾಲಕಿಯನ್ನು ಆದಷ್ಟು ಬೇಗ ಪತ್ತೆಹಚ್ಚುವಂತೆ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.













Leave a Reply