ಕಡಿದಾದ ಪ್ರದೇಶದಲ್ಲಿದ್ದ ಮೃತದೇಹವನ್ನು ಪತ್ತೆ ಹಚ್ಚಲು ನೆರವಾದ ಹೈಟೆಕ್ ಡ್ರೋನ್ ಕ್ಯಾಮೆರಾ - Malnad Tv

ಕಡಿದಾದ ಪ್ರದೇಶದಲ್ಲಿದ್ದ ಮೃತದೇಹವನ್ನು ಪತ್ತೆ ಹಚ್ಚಲು ನೆರವಾದ ಹೈಟೆಕ್ ಡ್ರೋನ್ ಕ್ಯಾಮೆರಾ

Spread the love

 

ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ಮಾಣಿಕ್ಯಧಾರಾದಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರೀನಂದಾ ಪ್ರಕರಣ ದುರಂತ ಅಂತ್ಯ ಕಂಡಿದೆ. ಕಳೆದ ಮಂಗಳವಾರದಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಇಂದು ಮಧ್ಯಾಹ್ನ ಬೆಟ್ಟದ ಕಡಿದಾದ ಪ್ರದೇಶದಲ್ಲಿ ಪತ್ತೆಯಾಗಿದೆ. ಕಳೆದ ಮೂರು ದಿನಗಳಿಂದ ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಹಗಲಿರುಳು ಶೋಧ ನಡೆಸುತ್ತಿದ್ದರು. ಇಂದು ಕಾರ್ಯಾಚರಣೆ ವೇಳೆ ಕೊಳೆತ ವಾಸನೆ ಬರುತ್ತಿದ್ದ ದಿಕ್ಕಿನಲ್ಲಿ ಹುಡುಕಾಟ ನಡೆಸಿದಾಗ ಬಾಲಕಿಯ ಶವ ಪತ್ತೆಯಾಗಿದೆ. ಕಡಿದಾದ ಜಾಗವಾಗಿದ್ದರಿಂದ ಥರ್ಮಲ್ ಡ್ರೋನ್ ತಂತ್ರಜ್ಞಾನ ಬಳಸಿ ಮೃತದೇಹವನ್ನು ಗುರುತಿಸಲಾಗಿದ್ದು, ಕಾರ್ಯಾಚರಣೆಗೆ ಇದು ಸಹಕಾರಿಯಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಮುಂದುವರಿಸಿದ್ದಾರೆ

Comments

Leave a Reply

Your email address will not be published. Required fields are marked *