ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡುವಾಳೆ ಬಳಿ ಮಳೆಯ ನಡುವೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಯುವಕರಿಗೆ ಶಾಸಕಿ ನಯನ ಮೋಟಮ್ಮ ಅವರು ಸಕಾಲದಲ್ಲಿ ಸ್ಪಂದಿಸಿ ಮಾನವೀಯತೆ ಮೆರೆದಿದ್ದಾರೆ. ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಾರ್ಮಕ್ಕಿ ಗ್ರಾಮದ ಕಿರಣ್ ಮತ್ತು ಪ್ರಫುಲ್ ಎಂಬ ಯುವಕರು ತೀವ್ರವಾಗಿ ಗಾಯಗೊಂಡು ರಕ್ತಸ್ರಾವದಿಂದ ಒದ್ದಾಡುತ್ತಿದ್ದರು. ಇದೇ ವೇಳೆ ಹೊರನಾಡು ದೇವಸ್ಥಾನದ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದ ಶಾಸಕರು, ತಕ್ಷಣವೇ ಸ್ಥಳದಲ್ಲಿ ವಾಹನ ನಿಲ್ಲಿಸಿ ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ ಬಣಕಲ್‌ನ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಂಕಷ್ಟದ ಸಮಯದಲ್ಲಿ ಶಾಸಕರು ತೋರಿದ ಈ ತತ್ಪರತೆ ಮತ್ತು ಸಮಯಪ್ರಜ್ಞೆಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.















Leave a Reply