🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಕಡವೆ ಬೇಟೆಯಾಡಿ ಮಾಂಸ ಕತ್ತರಿಸುತ್ತಿದ್ದ ಮೂವರ ಬಂಧನ !

---Advertisement---

 

ಚಿಕ್ಕಮಗಳೂರು: ಕಡವೆಯನ್ನು ಬೇಟೆಯಾಡಿ ಮಾಂಸ ಕತ್ತರಿಸುತ್ತಿದ್ದ ಮೂವರು ಆರೋಪಿಗಳನ್ನು ಲಕ್ಕವಳ್ಳಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಶಾಖೆ ವ್ಯಾಪ್ತಿಯಲ್ಲಿ ಈ ದಾಳಿ ನಡೆದಿದೆ.

ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಕ್ವಾಟ್ರಸ್ ನಿವಾಸಿಗಳಾದ ಕಿರಣ್ ಕುಮಾರ್, ಗೋವಿಂದರಾಜು ಹಾಗೂ ಭದ್ರಾವತಿಯ ಸೀತಾರಾಮಪುರದ ಮಣಿಕಂಠ ಬಂಧಿತ ಆರೋಪಿಗಳು. ಇವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಎಂ.ಸಿ.ಹಳ್ಳಿ ಕ್ವಾಟ್ರಸ್‌ನ ಪ್ರವೀಣ ಪ್ರಭು ಸೇರಿದಂತೆ ನಾಲ್ವರು ಆರೋಪಿಗಳು ಸ್ಥಳದಿಂದ ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ಮುಂದುವರಿದಿದೆ.

ಅರಣ್ಯ ಸಿಬ್ಬಂದಿ ದಾಳಿ ವೇಳೆ ಒಟ್ಟು 70 ಕೆಜಿ ಕಡವೆ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಪ್ರಮುಖ ಸೊತ್ತುಗಳನ್ನು ಜಪ್ತಿ ಮಾಡಿದ್ದಾರೆ.

​ಲಕ್ಕವಳ್ಳಿ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಈ ಕಾರ್ಯಚರಣೆಯಲ್ಲಿ ನಡೆಸಿದರು , ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Join WhatsApp

Join Now

Join Telegram

Join Now

Leave a Comment