🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಇಓ ಮೇಲೆ ಹಲ್ಲೆ ಆರೋಪ: ಪಿಡಿಓಗಳ ಮೌನ ಪ್ರತಿಭಟನೆ

---Advertisement---

 

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪ ಶೃಂಗೇರಿ ತಾಲೂಕು ಪಂಚಾಯಿತಿ ಇಓ ಸುದೀಪ್ ಅವರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪದ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕುಡಿಗೆ ರವೀಂದ್ರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರ ಬಂಧನಕ್ಕೆ ಒತ್ತಾಯಿಸಿ ಪಿಡಿಓಗಳು ಪೊಲೀಸ್ ಠಾಣೆ ಎದುರು ಮೌನ ಪ್ರತಿಭಟನೆ ನಡೆಸಿದ್ದಾರೆ. 

ಶನಿವಾರ ಕಸ್ತೂರಿ ರಂಗನ್ ವರದಿ ಕುರಿತ ಸಭೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಅಧಿಕಾರಿಗಳು ಹೇರೂರು ಬಳಿಯ ಹೋಟೆಲ್‌ಗೆ ತೆರಳಿದ್ದರು. ಊಟ ಮುಗಿಸಿ ಹೊರಬರುವಾಗ ರವೀಂದ್ರ ತಮ್ಮ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಇಓ ಸುದೀಪ್ ದೂರು ನೀಡಿದ್ದಾರೆ. 

ತಮ್ಮ ವಿರುದ್ಧ ಹಲ್ಲೆ ಹಾಗೂ ಬೆದರಿಕೆ ಆರೋಪ ಮಾಡಿರುವ ಸುದೀಪ್, ಪ್ರಕರಣ ಸಂಬಂಧ ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. 

ಇದೇ ವೇಳೆ ಗಲಾಟೆ ಸಂದರ್ಭದಲ್ಲಿ ರವೀಂದ್ರ ಅವರ ಜೊತೆಗಿದ್ದ ಕಾಂಗ್ರೆಸ್ ಕಾರ್ಯಕರ್ತ ನಾಗೇಶ್ ಕೂಡ ಇಓ ಸುದೀಪ್ ವಿರುದ್ಧ ದೂರು ನೀಡಿದ್ದಾರೆ. ಸುದೀಪ್ ಅವರು ಕುಡಿದು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಾಗೇಶ್ ಆರೋಪಿಸಿದ್ದಾರೆ. ಹೀಗಾಗಿ ಬಾಳೆಹೊನ್ನೂರು ಪೊಲೀಸರು ಎರಡೂ ಕಡೆಯಿಂದ ದೂರು ದಾಖಲಿಸಿಕೊಂಡಿದ್ದಾರೆ.

ಹಳೆಯ ವೈಷಮ್ಯದಿಂದ ಗಲಾಟೆ ನಡೆದಿದೆ ಎಂಬ ಆರೋಪವೂ ಕೇಳಿಬಂದಿದೆ. ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆದರೆ ಹೇಗೆ ಕೆಲಸ ಮಾಡುವುದು ಎಂದು ಪ್ರಶ್ನಿಸಿರುವ ಜಿಲ್ಲಾ ಪಿಡಿಓ ಸಂಘ, ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು ಹಾಗೂ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

Join WhatsApp

Join Now

Join Telegram

Join Now

और पढ़ें

<