ಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ 26 ವರ್ಷದ ಯುವಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.
ಮೃತ ಯುವಕನನ್ನು ಕಡೇಮನೆ ಗ್ರಾಮದ ಚೇತನ್ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ 7 ಮಂದಿ ಸ್ನೇಹಿತರು ಶಿಕಾರಿಗೆ ತೆರಳಿದ್ದರು ಎನ್ನಲಾಗಿದ್ದು, ಕಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕ ಗುಂಡೇಟು — ಯುವಕ ಸಾವುತ್ತಲಲ್ಲಿ ಆಕಸ್ಮಿಕವಾಗಿ ಗುಂಡು ತಗುಲಿ ಚೇತನ್ ಗಂಭೀರವಾಗಿ ಗಾಯಗೊಂಡಿದ್ದ.
ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಚೇತನ್ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಮೃತದೇಹವನ್ನು ಆಸ್ಪತ್ರೆಗೆ ತಂದಿದ್ದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿಕಾರಿಗೆ ತೆರಳಿದ್ದ ಏಳು ಮಂದಿಯಲ್ಲಿ ಮೂವರು ನಾಪತ್ತೆಯಾಗಿದ್ದು, ಘಟನೆ ಕುರಿತು ಬಾಳೆಹೊನ್ನೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




