🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಕೆರೆಯಲ್ಲಿ ಈಜಲು ಹೋಗಿ ಮೂವರು ಮಕ್ಕಳ ಸಾವು

---Advertisement---

ಚಿಕ್ಕಮಗಳೂರು: ಶಾಲೆಗೆ ರಜೆ ಇದ್ದ ಕಾರಣ ಈಜಲು ಕೆರೆಗೆ ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಅಸಹಜವಾಗಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದ ಚಿಕ್ಕ ಕೆರೆಯಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ತರುಣ್ (12), ಭುವನ್ (12) ಹಾಗೂ ಲಿಖಿತ್ (12) ಎಂದು ಗುರುತಿಸಲಾಗಿದೆ. ಮೃತ ಮೂವರೂ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಶಾಲೆಗೆ ರಜೆ ಇದ್ದಿದ್ದರಿಂದ ಮೂವರೂ ಗೆಳೆಯರು ಸೇರಿ ಗ್ರಾಮದ ಚಿಕ್ಕ ಕೆರೆಗೆ ಈಜಲು ತೆರಳಿದ್ದರು. ಕೆರೆಯಲ್ಲಿದ್ದ ಆಳವಾದ ಗುಂಡಿಗೆ ಇಳಿದಿದ್ದರಿಂದ ಈಜು ಬಾರದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

​ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಮೂವರು ಮುಗ್ಧ ಮಕ್ಕಳ ಸಾವಿನಿಂದಾಗಿ ಮರ್ಲೆ ಗ್ರಾಮದಲ್ಲಿ ಶೋಕಸಾಗರ ಆವರಿಸಿದೆ.

Join WhatsApp

Join Now

Join Telegram

Join Now