🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ವೈಯಕ್ತಿಕ ದ್ವೇಷಕ್ಕೆ 150ಕ್ಕೂ ಹೆಚ್ಚು ಅಡಿಕೆ ಗಿಡಗಳು ಬಲಿ!

---Advertisement---

 

ಚಿಕ್ಕಮಗಳೂರು ಜಿಲ್ಲೆ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಬೆಳೆಗಾರನ ಅಡಿಕೆ ಗಿಡಗಳನ್ನು ಕಡಿದು ಹಾಕಿರುವ ಘಟನೆ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬೆಳೆಗಾರ ಸಣ್ಣಪ್ಪ ಅವರು ಮುಕ್ಕಾಲು ಎಕರೆ ಪ್ರದೇಶದಲ್ಲಿ ಅಡಿಕೆ ಗಿಡಗಳನ್ನು ಬೆಳೆದಿದ್ದರು. ಸುಮಾರು ನಾಲ್ಕು ವರ್ಷಗಳಿಂದ ಆರೈಕೆ ಮಾಡಿಕೊಂಡು ಬೆಳೆಸಿದ್ದ 150ಕ್ಕೂ ಅಧಿಕ ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಕಡಿದು ಹಾಕಿದ್ದಾರೆ ಎನ್ನಲಾಗಿದೆ.

ಮುಂದಿನ ವರ್ಷದಿಂದ ಸಮೃದ್ಧ ಫಸಲು ನೀಡುವ ನಿರೀಕ್ಷೆಯಲ್ಲಿದ್ದ ಅಡಿಕೆ ಗಿಡಗಳು ಕಿಡಿಗೇಡಿಗಳ ಕೃತ್ಯಕ್ಕೆ ಬಲಿಯಾಗಿವೆ. ಇದರಿಂದ ಬೆಳೆಗಾರ ಸಣ್ಣಪ್ಪ ಅವರಿಗೆ ಭಾರೀ ನಷ್ಟ ಉಂಟಾಗುವ ಆತಂಕ ಎದುರಾಗಿದೆ.

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Join WhatsApp

Join Now

Join Telegram

Join Now