🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಮೆಕ್ಕಾದಲ್ಲಿ ಸಂಕಷ್ಟದಲ್ಲಿ 4 ಸಾವಿರ ಕನ್ನಡಿಗರು! ತವರಿಗೆ ಮರಳಲು ಸಾಧ್ಯವಾಗದೆ ಪರದಾಟ – ಸರ್ಕಾರದ ನೆರವಿಗೆ ಅಪ್ಸರ್ ಹಿಂದೂಸ್ಥಾನಿ ಮನವಿ

---Advertisement---

ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಸುಮಾರು 4 ಸಾವಿರ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದ್ದು, ವಿಮಾನಗಳ ಸಂಚಾರ ರದ್ದತಿ ಅಥವಾ ಮುಂದೂಡಿಕೆಯಿಂದಾಗಿ ತವರಿಗೆ ಮರಳಲು ಸಾಧ್ಯವಾಗದೆ ಪ್ರಯಾಣಿಕರು ಪರದಾಡುವಂತಾಗಿದೆ.

ಸೌದಿ ಏರ್‌ಲೈನ್ಸ್ ಹಾಗೂ ಇಂಡಿಗೋ ವಿಮಾನಗಳ ಹಾರಾಟ ನವೆಂಬರ್ 4ರವರೆಗೆ ಮುಂದೂಡಿಕೆಯಾಗಿದೆ ಎನ್ನಲಾಗಿದ್ದು, ಇದರಿಂದಾಗಿ ಮೆಕ್ಕಾದಲ್ಲಿ ಉಳಿದುಕೊಂಡಿರುವ ಕನ್ನಡಿಗರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಮೆಕ್ಕಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವವರಲ್ಲಿ ಮಧ್ಯಮ ವರ್ಗ ಹಾಗೂ ಕೆಳ ವರ್ಗದ ಜನರೇ ಹೆಚ್ಚಿದ್ದು, ತವರಿಗೆ ಮರಳಲು ಸಾಧ್ಯವಾಗದೆ ಕಷ್ಟ ಎದುರಿಸುತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನಗಳ ವ್ಯವಸ್ಥೆ ಮಾಡುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಮನವಿ ಮಾಡಲಾಗಿದೆ.

ಚಿಕ್ಕಮಗಳೂರು ಮೂಲದ ಅಪ್ಸರ್ ಹಿಂದೂಸ್ಥಾನಿ ಅವರು ಈ ಕುರಿತು ಮನವಿ ಮಾಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ ಕೇಂದ್ರ ವಿದೇಶಾಂಗ ಸಚಿವಾಲಯವೂ ಕೂಡಲೇ ಕ್ರಮ ಕೈಗೊಂಡು ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಸಾವಿರಾರು ಕನ್ನಡಿಗರು ವಿದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಕ್ಷಣ ಸ್ಪಂದಿಸಬೇಕು. ಅಗತ್ಯವಿದ್ದಲ್ಲಿ ವಿಶೇಷ ವಿಮಾನಗಳನ್ನು ವ್ಯವಸ್ಥೆ ಮಾಡಿ, ಮೆಕ್ಕಾದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಬೇಕು ಎಂಬುದು ಅಪ್ಸರ್ ಹಿಂದೂಸ್ಥಾನಿ ಅವರ ಮನವಿಯಾಗಿದೆ.