🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಮಲ್ಲಿಕಾರ್ಜುನ ಖರ್ಗೆಯವರು ತಕ್ಷಣವೇ ದೇಶದ ಜನತೆಯ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು :ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್

---Advertisement---

*ಚಿಕ್ಕಮಗಳೂರು:* ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ವೈಯಕ್ತಿಕ ನಿಂದನೆಯ ಹೇಳಿಕೆಯನ್ನು ಬಿಜೆಪಿ ಯುವ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ ಎಂದು ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಶ್ವದಲ್ಲೇ ಅತ್ಯಂತ ಜನಪ್ರಿಯ ನಾಯಕರಾಗಿ, ದೇಶವನ್ನು ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಜಿ ಅವರನ್ನು ಸೈದ್ಧಾಂತಿಕವಾಗಿ ಹಾಗೂ ಅಭಿವೃದ್ಧಿಯ ವಿಚಾರದಲ್ಲಿ ಎದುರಿಸಲಾಗದೆ ಹತಾಶಗೊಂಡಿರುವ ಕಾಂಗ್ರೆಸ್ ನಾಯಕರು, ಈಗ ವೈಯಕ್ತಿಕ ನಿಂದನೆ ಮತ್ತು ಕೆಳಮಟ್ಟದ ರಾಜಕೀಯಕ್ಕೆ ಇಳಿದಿರುವುದು ಅತ್ಯಂತ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್

ಭಾರತೀಯ ಸಂಸ್ಕೃತಿಯಲ್ಲಿ ದಿವಂಗತರಾದ ಹಿರಿಯರಿಗೆ ಗೌರವ ಕೊಡುವುದು ನಮ್ಮ ಪರಂಪರೆ. ಆದರೆ, ಕಾಂಗ್ರೆಸ್ ಪಕ್ಷದ ಅತ್ಯುನ್ನತ ಸ್ಥಾನದಲ್ಲಿರುವ ಖರ್ಗೆಯವರು ಪ್ರಧಾನಿಯವರ ತಂದೆಯವರ ಬಗ್ಗೆ ಇಂತಹ ಹಗುರ ಮಾತುಗಳನ್ನಾಡಿರುವುದು ಅವರ ಪಕ್ಷದ ನೈತಿಕ ಮತ್ತು ವೈಚಾರಿಕ ದೌರ್ಬಲ್ಯವನ್ನು ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಬಡ ಕುಟುಂಬದಿಂದ ಬಂದು, ಸ್ವಪ್ರಯತ್ನದಿಂದ ದೇಶದ ಪ್ರಧಾನಿಯಾಗಿ ದೇಶಸೇವೆ ಮಾಡುತ್ತಿರುವ ನಾಯಕನನ್ನು ಕಂಡರೆ ಕಾಂಗ್ರೆಸ್‌ಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಸತತ ಸೋಲುಗಳಿಂದ ಕಂಗಾಲಾಗಿರುವ ಕಾಂಗ್ರೆಸ್, ಇಂತಹ ಹೇಳಿಕೆಗಳ ಮೂಲಕ ತನ್ನ ನಿರಾಶೆಯನ್ನು ಹೊರಹಾಕುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಜಿ ಹಾಗೂ ದೇಶದ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆ ತಂದಿರುವ ಮಲ್ಲಿಕಾರ್ಜುನ ಖರ್ಗೆಯವರು ತಕ್ಷಣವೇ ದೇಶದ ಜನತೆಯ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ನಾಯಕರು ರಾಜಕೀಯ ಸಂವಾದದ ಮಟ್ಟವನ್ನು ಕುಸಿಯುವಂತೆ ಮಾಡುತ್ತಿದ್ದಾರೆ. ನಮ್ಮ ದೇಶದ ಯುವಜನತೆ ಇಂತಹ ಸಂಸ್ಕೃತಿರಹಿತ ಮತ್ತು ವಿಪರೀತ ವೈಯಕ್ತಿಕ ನಿಂದನೆಯ ರಾಜಕಾರಣವನ್ನು ಎಂದಿಗೂ ಸಹಿಸುವುದಿಲ್ಲ. ಇನ್ನಾದರೂ ಕಾಂಗ್ರೆಸ್ ನಾಯಕರು ವೈಯಕ್ತಿಕ ನಿಂದನೆಗಳನ್ನು ಬಿಟ್ಟು, ದೇಶದ ಅಭಿವೃದ್ಧಿಯ ವಿಷಯಗಳ ಮೇಲೆ ಚರ್ಚೆ ಮಾಡಲು ಕಲಿಯಲಿ ಎಂದು ಬಿಜೆಪಿ ಯುವ ಮೋರ್ಚಾ ಎಚ್ಚರಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.