🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ದೇವೀರಮ್ಮ ಬೆಟ್ಟ ಹತ್ತುವಾಗ ಹೃದಯಾಘಾತ: 35 ವರ್ಷದ ವ್ಯಕ್ತಿ ಸಾವು!

---Advertisement---

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ದೇವೀರಮ್ಮ ಬೆಟ್ಟ ಹತ್ತುವ ವೇಳೆ ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮೃತರನ್ನು ಲಕ್ಷ್ಮಣ್ (35) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.

ಲಕ್ಷ್ಮಣ್ ಈ ಹಿಂದೆಯೂ ಹೃದಯಾಘಾತಕ್ಕೆ ಒಳಗಾಗಿದ್ದು, ಬೈಪಾಸ್ ಶಸ್ತ್ರಚಿಕಿತ್ಸೆ ಕೂಡ ಮಾಡಿಸಿಕೊಂಡಿದ್ದರು ಎನ್ನಲಾಗಿದೆ. ದೇವೀರಮ್ಮ ಬೆಟ್ಟ ಹತ್ತುವ ಸಂದರ್ಭದಲ್ಲಿ ಹವಾಮಾನ ವೈಪರಿತ್ಯದಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.

ಕೂಡಲೇ ಸ್ಥಳದಲ್ಲಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಲಕ್ಷ್ಮಣ್ ಅವರ ರಕ್ಷಣೆಗೆ ಮುಂದಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ.

ಮೃತದೇಹವನ್ನು ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಈ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 

Join WhatsApp

Join Now

Join Telegram

Join Now

और पढ़ें