🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಚಿಕ್ಕಮಗಳೂರಿನಲ್ಲಿ ಕಳ್ಳರ ಹಾವಳಿ ಹೆಚ್ಚಳ: ಮನೆ ಕಳ್ಳತನಕ್ಕೆ ಹೊಂಚು ಹಾಕಿದ ಖದೀಮ, ಲೈಟ್ ಆನ್ ಆಗುತ್ತಿದ್ದಂತೆ ಕಾಂಪೌಂಡ್ ಹಾರಿ ಎಸ್ಕೇಪ್!

---Advertisement---

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳ್ಳಕಾಕರ ಹಾವಳಿ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು, ಜನಸಾಮಾನ್ಯರು ಆತಂಕದಲ್ಲಿ ದಿನದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಮಧ್ಯರಾತ್ರಿ ಖದೀಮನೊಬ್ಬ ಮನೆ ಕಳ್ಳತನಕ್ಕೆ ಹೊಂಚು ಹಾಕಿದ್ದ. ಆದರೆ, ಮನೆಯೊಳಗಿನ ಲೈಟ್ ಆನ್ ಆಗುತ್ತಿದ್ದಂತೆ ಕಂಗಾಲಾದ ಆತ, ಅರೆಕ್ಷಣವೂ ಅಲ್ಲಿ ನಿಲ್ಲದೆ ಕಾಂಪೌಂಡ್ ಹಾರಿ ಎಸ್ಕೇಪ್ ಆಗಿದ್ದಾನೆ. ಈ ಕಳ್ಳನ ಚಲನವಲನದ ದೃಶ್ಯವಷ್ಟೂ ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸಂಪೂರ್ಣವಾಗಿ ರೆಕಾರ್ಡ್ ಆಗಿದೆ.

​ಇತ್ತೀಚಿನ ದಿನಗಳಲ್ಲಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹ ಪ್ರಕರಣಗಳು ವಿಪರೀತವಾಗಿ ಹೆಚ್ಚುತ್ತಿವೆ. ಅದರಲ್ಲೂ ಒಂಟಿಯಾಗಿರುವ ಮಹಿಳೆಯರು ಹಾಗೂ ವೃದ್ಧೆಯರನ್ನೇ ಟಾರ್ಗೆಟ್ ಮಾಡಿಕೊಂಡು ಸರಗಳ್ಳತನ ಮತ್ತು ಮನೆಗಳ್ಳತನದಂತಹ ಕೃತ್ಯಗಳನ್ನು ಎಗ್ಗಿಲ್ಲದೆ ನಡೆಸಲಾಗುತ್ತಿದೆ. ಸಾಲದೆಂಬಂತೆ ಇದೀಗ ಮಧ್ಯರಾತ್ರಿಯ ಹೊತ್ತಲ್ಲಿ ಕಳ್ಳರು ಓಡಾಡುತ್ತಿರುವ ಈ ಸಿಸಿಟಿವಿ ದೃಶ್ಯಗಳು ಬಯಲಾಗಿರುವುದು ಸ್ಥಳೀಯರ ನಿದ್ದೆಗೆಡಿಸಿದೆ. ಸರಣಿ ಕಳ್ಳತನದಿಂದ ಬೆಚ್ಚಿಬಿದ್ದಿರುವ ಸಾರ್ವಜನಿಕರು, ಪೊಲೀಸರು ರಾತ್ರಿ ವೇಳೆಯಲ್ಲಿ ಕಡ್ಡಾಯವಾಗಿ ಹೆಚ್ಚಿನ ಗಸ್ತು ತಿರುಗುವ ಮೂಲಕ ಸೂಕ್ತ ಭದ್ರತೆ ಒದಗಿಸಬೇಕೆಂದು ತೀವ್ರವಾಗಿ ಒತ್ತಾಯಿಸುತ್ತಿದ್ದಾರೆ.

Join WhatsApp

Join Now

Join Telegram