🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಮಾಜಿ ಸಚಿವ ಡಿ.ಎನ್.ಜೀವರಾಜ್‌ಗೆ ಬಿಗ್ ರಿಲೀಫ್

---Advertisement---

 

 

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಡಿ.ಎನ್.ಜೀವರಾಜ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜೀವರಾಜ್ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಕಾಂಗ್ರೆಸ್ ಮುಖಂಡ ಹಾಗೂ ವಕ್ತಾರ ಸುಧೀರ್ ಕುಮಾರ್ ಮುರೋಳ್ಳಿ ನೀಡಿದ್ದ ದೂರಿನ ಆಧಾರದ ಮೇಲೆ ಡಿ.ಎನ್.ಜೀವರಾಜ್ ವಿರುದ್ಧ ಅಕ್ರಮ, ಕ್ರಿಮಿನಲ್ ಚಟುವಟಿಕೆ, ವಂಚನೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಜೀವರಾಜ್ ಹೈಕೋರ್ಟ್ ಮೊರೆ ಹೋಗಿದ್ದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೀವರಾಜ್, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೇವಲ 201 ಮತಗಳ ಅಂತರದಿಂದ ಸೋಲು ಕಂಡಿದ್ದರು. ಚುನಾವಣಾ ಮತ ಎಣಿಕೆ ಪ್ರಕ್ರಿಯೆಯನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದ ಅವರು, ತಿರಸ್ಕೃತ 279 ಅಂಚೆ ಮತಗಳ ಪರಿಶೀಲನೆ ಹಾಗೂ ಅಂಚೆ ಮತಗಳ ಮರು ಎಣಿಕೆಗೆ ಮನವಿ ಮಾಡಿದ್ದರು.

ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಅಂಚೆ ಮತಗಳ ಪರಿಶೀಲನೆ ಮತ್ತು ಮರು ಎಣಿಕೆಗೆ ಸೂಚನೆ ನೀಡಿತ್ತು. ಅದರಂತೆ ಮೇ 2ರಂದು ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಡಿ.ಎನ್.ಜೀವರಾಜ್ ಅವರು 52 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಈ ಬೆಳವಣಿಗೆಯ ಬೆನ್ನಲ್ಲೇ ಸುಧೀರ್ ಕುಮಾರ್ ಮುರೋಳ್ಳಿ ಅವರು ಜೀವರಾಜ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಇದೀಗ ಪ್ರಕರಣ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠ, ಜೀವರಾಜ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ.

 

 

Join WhatsApp

Join Now