🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಕಾಫಿನಾಡಿನಲ್ಲಿ ಭುಗಿಲೆದ್ದ ಆಕ್ರೋಶ: ‘ಆಪರೇಷನ್ ಗಜ’ ವಿರೋಧಿಸಿ ಇಂದು ಸಂಪೂರ್ಣ ಮೂಡಿಗೆರೆ ಬಂದ್!

---Advertisement---

 

​ಮೂಡಿಗೆರೆ: ತತ್ಕೊಳ ಅರಣ್ಯ ಮಾರ್ಗವಾಗಿ ಭದ್ರಾ ಅಭಯಾರಣ್ಯಕ್ಕೆ ಕಾಡಾನೆಗಳನ್ನು ಸ್ಥಳಾಂತರಿಸುವ ಸರ್ಕಾರದ ‘ಆಪರೇಷನ್ ಗಜ’ ಕಾರ್ಯಾಚರಣೆಗೆ ಕಾಫಿನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ನಿರ್ಧಾರವನ್ನು ಖಂಡಿಸಿ ಸರ್ವಪಕ್ಷಗಳು ಹಾಗೂ ವಿವಿಧ ಸ್ಥಳೀಯ ಸಂಘಟನೆಗಳು ಇಂದು ಸಂಪೂರ್ಣ ಮೂಡಿಗೆರೆ ತಾಲೂಕು ಬಂದ್‌ಗೆ ಕರೆ ನೀಡಿವೆ.

​ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ತಾಲೂಕಿನಾದ್ಯಂತ ಬಂದ್ ಆಚರಿಸಲಾಗುತ್ತಿದ್ದು, ಹೋರಾಟಗಾರರು ಬೀದಿಗಿಳಿದು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುತ್ತಿದ್ದಾರೆ. ವ್ಯಾಪಾರಿಗಳು ಸ್ವಯಂಪ್ರೇರಿತವಾಗಿ ತಮ್ಮ ವಹಿವಾಟು ಸ್ಥಗಿತಗೊಳಿಸುವ ಮೂಲಕ ಈ ಹೋರಾಟಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಲಾಗಿದೆ. ಈ ಬೃಹತ್ ಪ್ರತಿಭಟನೆಗೆ ಪಕ್ಷಭೇದ ಮರೆತು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಒಂದಾಗಿದ್ದು, ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಗಳೂ ಸಂಪೂರ್ಣ ಬೆಂಬಲ ಸೂಚಿಸುವುದರೊಂದಿಗೆ ಮೂಡಿಗೆರೆ ಇಂದು ಸಂಪೂರ್ಣ ಸ್ತಬ್ಧಗೊಂಡಿದೆ.

Join WhatsApp

Join Now

Join Telegram

Join Now

और पढ़ें