🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಯಗಚಿ ಸೇತುವೆ ಬಳಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು, ಬೆಂಕಿಗಾಹುತಿಯಾದ ಬೈಕ್!

---Advertisement---

 

ಹಾಸನ: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕಂದಲಿ ಗ್ರಾಮದ ಸಮೀಪದ ಯಗಚಿ ಸೇತುವೆ ಬಳಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಕಾರು ಮತ್ತು ಬೈಕ್ ಮುಖಾಮುಖಿಯಾಗಿ ಡಿಕ್ಕಿಯಾದ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಆವರಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಬೈಕ್ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಹಾಸನ ತಾಲ್ಲೂಕಿನ ಹಂಚಿಹಳ್ಳಿ ಗ್ರಾಮದ ನಿವಾಸಿ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಆದರೆ ಮೃತರ ಹೆಸರು ಮತ್ತು ವಯಸ್ಸಿನ ಕುರಿತು ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ಬೆಂಕಿಗಾಹುತಿಯಾದ ಬೈಕ್ ಹಾಗೂ ಅಪಘಾತದ ಭೀಕರ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ.

 

Join WhatsApp

Join Now

Join Telegram

Join Now

और पढ़ें