ಜೂ.25ರಂದು ಲೋಕ ಅದಾಲತ್: ನ್ಯಾ| ಶುಭಾ ಗೌಡರ್
1 min readಚಿಕ್ಕಮಗಳೂರು: ಜಿಲ್ಲಾದ್ಯಂತ ಜೂ.25ರಂದು ಲೋಕ ಅದಾಲತ್ ಆಯೋಜಿಸಲಾಗಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶುಭ ಗೌಡರ್ ತಿಳಿಸಿದರು.ಬುಧವಾರ ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಅವರು, ಕಕ್ಷಿದಾರರಿಗೆ ಶೀಘ್ರವೇ ನ್ಯಾಯ ಒದಗಿಸುವ ದೃಷ್ಠಿಯಿಂದ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಇಲ್ಲಿ ಇತ್ಯಾರ್ಥವಾಗುವ ವ್ಯಾಜ್ಯಗಳಿಗೆ ಮೇಲ್ಮನವಿ ಸಲ್ಲಿಸಲು ಅವ ಕಾಶವಿಲ್ಲ ಎಂದರು.
ಅದಾಲತ್ನಲ್ಲಿ ವ್ಯಾಜ್ಯಗಳನ್ನು ಇತ್ಯಾರ್ಥಪಡಿಸಿಕೊಳ್ಳುವುದರಿಂದ ಕಕ್ಷಿದಾರರ ಸಮಯ ಮತ್ತು ಹಣ ವ್ಯಯವಾಗುವುದನ್ನು ತಪ್ಪಿಸಬಹುದಾಗಿದೆ. ಜಿಲ್ಲೆಯಲ್ಲಿ ಇದುವರೆಗೂ 6,448 ಪ್ರಕರಣಗಳನ್ನು ಲೋಕ ಅದಾಲತ್ನಲ್ಲಿ ಇತ್ಯಾರ್ಥಪಡಿಸಲಾಗಿದೆ ಎಂದು ತಿಳಿಸಿದರು.
ವರ್ಷದಲ್ಲಿ 4ಬಾರೀ ಲೋಕ ಅದಾಲತ್ ಆಯೋಜಿಸಲಾಗುತ್ತಿದ್ದು, ಜಿಲ್ಲಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಅದಾಲತ್ ನಡೆಯಲಿದೆ. ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿ ಕೊಳ್ಳಲಾಗಿದೆ. ವಚ್ಯೂವಲ್ ಹಾಗೂ ಖುದ್ದು ಕಕ್ಷಿದಾರರ ಸಮ್ಮುಖದಲ್ಲೂ ಪ್ರಕರಣ ಇತ್ಯಾರ್ಥ ಪಡಿಸಲಾಗುವುದು ಎಂದು ಮಾಹಿತಿ ನೀಡಿದರು.
ಲೋಕ ಅದಾಲತ್ನಲ್ಲಿ ಶೀಘ್ರವೇ ಪ್ರಕರಣ ಇತ್ಯಾರ್ಥವಾಗುತ್ತದೆ. ನ್ಯಾಯಾಲಯಕ್ಕೆ ಕಟ್ಟಿದ ಶುಲ್ಕವನ್ನು ಹಿಂತಿರುಗಿಸಲಾಗುವುದು. ಇದರಿಂದ ಸ್ನೇಹ ಸಂಬAಧಗಳು ಉತ್ತಮಗೊಳ್ಳುತ್ತದೆ ಈ ಹಿನ್ನಲೆಯಲ್ಲಿ ಅದಾಲತ್ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ನಂದೀಶ್, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಸ್.ಸೋಮ ಇದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g