🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಸಾಂಬಾರಿನ ವಿಚಾರಕ್ಕೆ ತಂದೆ ಬೈದರೆಂದು ಮನನೊಂದು 22 ವರ್ಷದ ಯುವತಿ ಆತ್ಮಹತ್ಯೆ

---Advertisement---

 

 

ಮೂಡಿಗೆರೆ ತಾಲ್ಲೂಕಿನ ದೇವವೃಂದ ಗ್ರಾಮದಲ್ಲಿ ತಂದೆ ಬೈದರೆಂಬ ಕಾರಣಕ್ಕೆ ಮನನೊಂದು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು 22 ವರ್ಷದ ಸೌಜನ್ಯ ಪೂಜಾರಿ ಎಂದು ಗುರುತಿಸಲಾಗಿದೆ.

ಶನಿವಾರ ಬೆಳಗ್ಗೆ ಸೌಜನ್ಯ ಅವರ ತಂದೆ ನಟೇಶ್ ಪೂಜಾರಿ ಅವರು ಮಗಳಿಗೆ ತರಕಾರಿ ತಂದುಕೊಟ್ಟು ಸಾಂಬಾರು ಮಾಡುವಂತೆ ತಿಳಿಸಿ ಹೊರಗೆ ಹೋಗಿದ್ದರು. ಮಧ್ಯಾಹ್ನ ಮನೆಗೆ ವಾಪಸ್ ಬಂದಾಗ ಅಡುಗೆ ಮಾಡದಿದ್ದಕ್ಕೆ ಮಗಳನ್ನು ಬೈದಿದ್ದಾರೆ ಎನ್ನಲಾಗಿದೆ. ಇದರಿಂದ ತೀವ್ರವಾಗಿ ನೊಂದ ಸೌಜನ್ಯ, ತಂದೆ ಪಕ್ಕದ ಮನೆಯಿಂದ ಸಾರು ತರಲು ಹೋದ ಸಂದರ್ಭದಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಗೋಣಿಬೀಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆ ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ನಡೆಸಲಾಗಿದೆ. ಈ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Join WhatsApp

Join Now

Join Telegram

Join Now