ಚಿಕ್ಕಮಗಳೂರು ನಗರಸಭೆಯ ವ್ಯಾಪ್ತಿಯಲ್ಲಿ ತೀವ್ರ ಸಂಚಲನ ಮೂಡಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಉಪ್ಪಳ್ಳಿ ವಾರ್ಡಿನ ಕಾಂಗ್ರೆಸ್ ಬೂತ್ ಏಜೆಂಟ್ ರಜಾಕ್ ಎಂಬುವವರ ಮನೆಯಲ್ಲಿ ಅಧಿಕೃತ ಅನ್ಯುಮರೇಶನ್ ಫಾರಂಗಳ ಇಡೀ ಬಂಡಲನ್ನೇ ತಲುಪಿಸಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ.
ನಗರಸಭೆಯ ಹೆಲ್ತ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಈ ಪ್ರಕ್ರಿಯೆಯ ಸೂಪರ್ವೈಸರ್ ಆಗಿರುವ ನಾಗಪ್ಪ ಎಂಬುವವರೇ ನೇರವಾಗಿ ಈ ಫಾರಂಗಳನ್ನು ಕಾಂಗ್ರೆಸ್ ಏಜೆಂಟ್ ಮನೆಗೆ ತಲುಪಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸರ್ಕಾರಿ ಮತ್ತು ಅಧಿಕೃತ ಸಮೀಕ್ಷಾ ದಾಖಲೆಗಳನ್ನು ನಿಯಮಬಾಹಿರವಾಗಿ ರಾಜಕೀಯ ಪಕ್ಷದ ಮುಖಂಡರೊಬ್ಬರ ಮನೆಯಲ್ಲಿ ಇಟ್ಟಿರುವುದು ಸಾರ್ವಜನಿಕ ವಲಯದಲ್ಲಿ ಹಾಗೂ ವಿರೋಧ ಪಕ್ಷಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಚುನಾವಣಾ ಅಥವಾ ಸಮೀಕ್ಷಾ ಪ್ರಕ್ರಿಯೆಯ ನಿಷ್ಪಕ್ಷಪಾತದ ಮೇಲೆ ಇದು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದು, ಕರ್ತವ್ಯ ಲೋಪ ಎಸಗಿರುವ ಹೆಲ್ತ್ ಇನ್ಸ್ಪೆಕ್ಟರ್ ನಾಗಪ್ಪ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.












Leave a Reply