ಸೇತುವೆ ಮೇಲಿಂದ ನದಿಗೆ ಹಾರಿ ನರ್ಸ್ ಆತ್ಮಹತ್ಯೆ

Spread the love

 

ಎನ್.ಆರ್. ಪುರ: ಮಡಬು ಸೇತುವೆ ಮೇಲಿಂದ ನದಿಗೆ ಜಿಗಿದು ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ  ಘಟನೆ ನಡೆದಿದೆ.

​ಮೃತರನ್ನು ಮುುತ್ತಿನಕೊಪ್ಪ ಮೂಲದ ರನ್ಯ (35) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು

ರನ್ಯ ಅವರು ಮಡಬು ಸೇತುವೆ ಬಳಿ ಬಂದು, ದಿಢೀರನೆ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ತಕ್ಷಣವೇ ಕಾರ್ಯಾಚರಣೆ ನಡೆಸಲಾಗಿದೆ. ರನ್ಯ ಅವರ ಮೃತದೇಹವನ್ನು ನದಿಯಿಂದ ಹೊರತೆಗೆಯಲಾಗಿದೆ.

ಮೃತ ರನ್ಯ ಅವರಿಗೆ ಸುಮಾರು 12 ವರ್ಷಗಳ ಹಿಂದೆ ವಿವಾಹವಾಗಿತ್ತು. ಇವರು ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಕುಟುಂಬಸ್ಥರು ಮತ್ತು ಸಂಬಂಧಿಕರು ಆಘಾತದಲ್ಲಿದ್ದಾರೆ. ಈ ಸಂಬಂಧ ಎನ್.ಆರ್. ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯನ್ನು ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *