🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಸರ್ಕಾರಿ ಬಸ್ ಟಯರ್; 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

---Advertisement---

 

​ಕೊಪ್ಪ: ಚಲಿಸುತ್ತಿದ್ದ KSRTC ಬಸ್‌ನ ಟಯರ್ ಹಠಾತ್ತನೆ ಕಳಚಿಬಿದ್ದ ಘಟನೆ ಕೊಪ್ಪ ತಾಲೂಕಿನ ನಾಗಲಾಪುರ ಸೇತುವೆ ಬಳಿ ನಡೆದಿದ್ದು, ಬಸ್‌ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

​ಶೃಂಗೇರಿಯಿಂದ ಶಿವಮೊಗ್ಗಕ್ಕೆ ಹೊರಟಿದ್ದ ಶಿವಮೊಗ್ಗ ಡಿಪೋಗೆ ಸೇರಿದ ಸರ್ಕಾರಿ ಬಸ್‌ ಕೊಪ್ಪ ತಾಲೂಕಿನ ನಾಗಲಾಪುರ ಸೇತುವೆ ಬಳಿ ಬರುತ್ತಿದ್ದಂತೆ ಏಕಾಏಕಿ ಬಸ್‌ನ ಟಯರ್ ಕಳಚಿ ಬಿದ್ದಿದೆ. ಬಸ್ ಚಲಿಸುತ್ತಿರುವಾಗಲೇ ಟಯರ್ ಕಳಚಿ ಬಿದ್ದಿದ್ದರಿಂದ ವಾಹನದಲ್ಲಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾಗಿ ಕಂಗಾಲಾಗಿದ್ದಾರೆ.

​ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಚಾಲಕ ತಕ್ಷಣವೇ ಬಸ್ ಅನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಕಳಚಿಬಿದ್ದ ಬಸ್ ಟಯರ್ ತಗಲಿ ರಸ್ತೆಯಲ್ಲಿ ಸಾಗುತ್ತಿದ್ದ ಮತ್ತೊಂದು ವಾಹನಕ್ಕೂ ಹಾನಿಯಾಗಿರುವುದಾಗಿ ತಿಳಿದುಬಂದಿದೆ.

​ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದು, ದಿನೇ ದಿನೇ ಹಳೆಯದಾಗುತ್ತಿರುವ ಮತ್ತು ಕಳಪೆ ನಿರ್ವಹಣೆಯ ಸರ್ಕಾರಿ ಬಸ್‌ಗಳ ಸ್ಥಿತಿ ಕಂಡು ಪ್ರಯಾಣಿಕರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join WhatsApp

Join Now

Join Telegram

Join Now

और पढ़ें