🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ತಾಲೂಕು ಪಂಚಾಯಿತಿ ಇಓ ಮೇಲೆ ಹಲ್ಲೆ ಆರೋಪ; ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ವಿರುದ್ಧ ಪ್ರಕರಣ

---Advertisement---

 

ಚಿಕ್ಕಮಗಳೂರು: ಶೃಂಗೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ (ಇಓ) ಸುದೀಪ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕುಡಿಗೆ ರವೀಂದ್ರ ವಿರುದ್ಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶನಿವಾರ ಬಾಳೆಹೊನ್ನೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿ ಸಂಬಂಧ ಸಭೆ ನಡೆದಿತ್ತು. ಸಭೆ ಮುಗಿಸಿ ಸಿಎಂ ಕಾರ್ಯಕ್ರಮದಿಂದ ವಾಪಸ್ ತೆರಳುತ್ತಿದ್ದ ವೇಳೆ ಗಲಾಟೆ ನಡೆದಿರುವುದಾಗಿ ತಿಳಿದುಬಂದಿದೆ.

ಬಳಿಕ ರಾತ್ರಿ ಊಟ ಮುಗಿಸಿ ಹೋಟೆಲ್‌ನಿಂದ ಹೊರಬಂದಾಗ ತಮ್ಮನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಇಓ ಸುದೀಪ್ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಹೇರೂರು ಬಳಿ ನಡೆದಿದೆ ಎನ್ನಲಾಗಿದೆ.

ಹಲ್ಲೆಗೊಳಗಾದ ಇಓ ಸುದೀಪ್ ಅವರನ್ನು ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅವರ ದೂರಿನ ಆಧಾರದ ಮೇಲೆ ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕುಡಿಗೆ ರವೀಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಶ್ ಎಂಬುವರೂ ದೂರು ನೀಡಿದ್ದು, ತಮ್ಮ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಈ ದೂರಿನ ಆಧಾರದ ಮೇಲೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸರು ಎರಡೂ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ .

Join WhatsApp

Join Now

Join Telegram

Join Now

<