मौसम क्रिकेट ऑपरेशन सिंदूर क्रिकेट स्पोर्ट्स बॉलीवुड जॉब - एजुकेशन बिजनेस लाइफस्टाइल देश विदेश राशिफल आध्यात्मिक अन्य
---Advertisement---

ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಭೀಕರ ದುರಂತ: ಮದ್ಯವ್ಯಸನಿ ಚಾಲಕನ ಅಟ್ಟಹಾಸಕ್ಕೆ ಮಗು ಬಲಿ

---Advertisement---

 

​ಚಿಕ್ಕಮಗಳೂರು: ಜಿಲ್ಲೆಯ ಬಿಳೇಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆಯ ಸಂಭ್ರಮದ ನಡುವೆ ಭೀಕರ ದುರಂತವೊಂದು ಸಂಭವಿಸಿದೆ. ಮದ್ಯ ಸೇವಿಸಿ ಅತೀ ವೇಗವಾಗಿ ಕಾರು ಚಲಾಯಿಸಿದ ಚಾಲಕನ ಅಚಾತುರ್ಯದಿಂದ 7 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಂಬೇಡ್ಕರ್ ಜಯಂತಿ ಪ್ರಯುಕ್ತ ಗ್ರಾಮದಲ್ಲಿ ಮೆರವಣಿಗೆ ಸಾಗುತ್ತಿದ್ದಾಗ, ಮದ್ಯದ ಅಮಲಿನಲ್ಲಿದ್ದ ಸುಧಾಕರ್ ಎಂಬಾತ ಜನಸಂದಣಿಯ ಮೇಲೆ ಕಾರು ಚಲಾಯಿಸಿದ್ದಾನೆ. ಈ ಭೀಕರ ಅಪಘಾತದಲ್ಲಿ ಸಾನ್ವಿ (7 ವರ್ಷ) ಎಂಬ ಮಗು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದೆ. ಅಪಘಾತದಲ್ಲಿ ನಿಶ್ಚಿತ್ (11), ತೃಪ್ತಿ, ತಿಮ್ಮರಾಜು, ಉಷಾ, ಚೇತನ್, ಸೃಷ್ಠಿ ಹಾಗೂ ನಾಗರಾಜ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಕಾರಿನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಪರಾರಿಯಾಗಿದ್ದು, ಚಾಲಕ ಸುಧಾಕರ್‌ನನ್ನು ಸ್ಥಳೀಯರು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆಕ್ರೋಶಿತ ಗ್ರಾಮಸ್ಥರು ಕಾರಿನ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಜಿಲ್ಲಾಸ್ಪತ್ರೆ ಮುಂಭಾಗದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, “ಚಾಲಕನಿಗೆ ಚಿಕಿತ್ಸೆ ನೀಡುವುದಕ್ಕಿಂತ ಗಾಯಾಳುಗಳ ಜೀವ ಉಳಿಸಲು ಗಮನಹರಿಸಿ” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಸ್ಥಳಕ್ಕೆ ಎಎಸ್ಪಿ ಜಯಕುಮಾರ್ ಭೇಟಿ ನೀಡಿ ಆಕ್ರೋಶಿತರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join WhatsApp

Join Now

Join Telegram

Join Now

Leave a Comment