September 8, 2024

MALNAD TV

HEART OF COFFEE CITY

ನಡೆದುಕೊಂಡು ಹೋಗುತ್ತಿದ್ದ ಯುವಕನ ಮೇಲೆ ಬಿದ್ದ ವಿದ್ಯುತ್ ಕಂಬ

1 min read

 

ಜಿಲ್ಲೆಯಲ್ಲಿ ಮಳೆಯ ಅಬ್ಬರ ಕಡಿಮೆ ಆಗಿದ್ದರೂ ಬಿರುಗಾಳಿ ಮಾತ್ರ ತೀವ್ರವಾಗಿ ಬೀಸುತ್ತಿದ್ದೆ. ಇದರಿಂದಾಗಿ ಮರಗಳು ಉರುಳುವುದು ಹೆಚ್ಚಾಗಿದೆ, ಜೊತೆಗೆ ವಿದ್ಯುತ್ ಕಂಬ ಸಹಾ ಮುರಿದು ಬೀಳುತ್ತಿವೆ. ಮೂಡಿಗೆರೆ ತುಂಬರಗಡಿ ಗ್ರಾಮದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನ ಮೇಲೆ ಕಂಬ ಬಿದ್ದಿದ್ದು ತೀವ್ರ ರಕ್ತಸ್ರಾವದಿಂದ ಆತ ಆಸ್ಪತ್ರೆಗೆ ದಾಖಲಾಗಿದ್ದಾನೆ.

 

ಕಾಫಿನಾಡ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆ ಮುಂದುವರೆದಿದೆ
ಜೊತೆಗೆ ಕೆಲವು ಕಡೆಗಳಲ್ಲಿ ಬೀಸ್ತಿರೋ ರಣಗಾಳಿಯಿಂದ ವಿದ್ಯುತ್ ಕಂಬವೊಂದು ಉರುಳಿ
ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವಕನ ತಲೆ ಮೇಲೆ ಬಿದ್ದಿದೆ.
ಮೂಡಿಗೆರೆ ತಾಲೂಕಿನ ತುಂಬರಗಡಿ ಗ್ರಾಮದಲ್ಲಿ ಘಟನೆ ನಡೆದಿದ್ದು,
ಬಸ್ ಇಳಿದು ಮನೆಗೆ ಹೋಗುತ್ತಿದ್ದ ಯುವಕನ ಮೇಲೆ ಕಂಬ ಏಕಾಏಕಿ ಬಿದ್ದಿದೆ. ದಿವೀತ್ ಎಂಬ ಯುವಕನ ತಲೆಗೆ ಗಂಭೀರ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಲವೆಡೆ ಬಿರುಗಾಳಿಯಿಂದಾಗಿ ವಿದ್ಯುತ್ ಕಂಬಗಳು ಬಿದ್ದಿದ್ದು ಹತ್ತಾರು ಗ್ರಾಮಗಳಲ್ಲಿ ವಾರಗಳಿಂದ ಪವರ್ ಕಟ್ ಆಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!