मौसम क्रिकेट ऑपरेशन सिंदूर क्रिकेट स्पोर्ट्स बॉलीवुड जॉब - एजुकेशन बिजनेस लाइफस्टाइल देश विदेश राशिफल आध्यात्मिक अन्य
---Advertisement---

ಟಿಪ್ಪು ಕಟೌಟ್ ವಿಡಿಯೋಗೆ ದೇಶವಿರೋಧಿ ಹಾಡು ಸೇರ್ಪಡೆ: ಕಿಡಿಗೇಡಿಗಳ ವಿರುದ್ಧ ಚಿಕ್ಕಮಗಳೂರು ಪೊಲೀಸರ ಸುಮೋಟೋ ಕೇಸ್

---Advertisement---

 

 

​ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ಈದ್ ಮಿಲಾದ್ ಆಚರಣೆ ವೇಳೆ ಹಾಕಲಾಗಿದ್ದ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್‌ಗೆ ಸಂಬಂಧಿಸಿದ ವಿಡಿಯೋವೊಂದಕ್ಕೆ , ದೇಶವಿರೋಧಿ ಹಾಗೂ ಪಾಕಿಸ್ತಾನಿ ಸೇನೆಯನ್ನು ಹೊಗಳುವ ಹಾಡನ್ನು ಸೇರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿ ಹೊತ್ತಿಸಿದ್ದ ಕಿಡಿಗೇಡಿಗಳ ವಿರುದ್ಧ ಪೊಲೀಸರು ಸ್ವಯಂಪ್ರೇರಿತ (ಸುಮೋಟೋ) ದೂರು ದಾಖಲಿಸಿಕೊಂಡಿದ್ದಾರೆ.

​ನಗರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ದೃಶ್ಯಾವಳಿಗೆ “ನಾವು ಪಾಕಿಸ್ತಾನಿ ಮುಜಾಹಿದ್‌ಗಳು…” ಎಂಬ ಸಾಲುಗಳಿರುವ ಹಾಡನ್ನು ಜೋಡಿಸಿ, ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ರೀಲ್ಸ್ ಅಪ್‌ಲೋಡ್ ಮಾಡಲಾಗಿತ್ತು. ಈ ವಿಡಿಯೋ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪಿಎಸ್‌ಐ ಧನರಾಜ್ ಅವರೇ ಸ್ವತಃ ಠಾಣೆಗೆ ದೂರು ನೀಡಿದ್ದಾರೆ.

​ಸಮಾಜದಲ್ಲಿ ಕೋಮು ಸೌಹಾರ್ದ ಕೆಡಿಸುವ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹಾಗೂ ದ್ವೇಷ ಹುಟ್ಟುಹಾಕುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಸದ್ಯ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳ ಪತ್ತೆಗೆ ತನಿಖೆ ತೀವ್ರಗೊಳಿಸಿದ್ದಾರೆ.

Join WhatsApp

Join Now

Join Telegram

Join Now

Leave a Comment