मौसम क्रिकेट ऑपरेशन सिंदूर क्रिकेट स्पोर्ट्स बॉलीवुड जॉब - एजुकेशन बिजनेस लाइफस्टाइल देश विदेश राशिफल आध्यात्मिक अन्य
---Advertisement---

ಟಿಪ್ಪು ಸುಲ್ತಾನ್ ಕಟೌಟ್ ವೀಡಿಯೋಗೆ ದೇಶವಿರೋಧಿ ಹಾಡು ಬಳಕೆ: ಚಿಕ್ಕಮಗಳೂರಿನಲ್ಲಿ ಹಿಂದೂ ಸಂಘಟನೆಗಳ ತೀವ್ರ ಆಕ್ರೋಶ!

---Advertisement---

 

​ಚಿಕ್ಕಮಗಳೂರು: ನಗರದಲ್ಲಿ ನಡೆಯಲಿರುವ ಈದ್ ಮಿಲಾದ್ ಮೆರವಣಿಗೆಯ ಹಿನ್ನೆಲೆಯಲ್ಲಿ ನಿರ್ಮಿಸಲಾಗಿರುವ ಬೃಹತ್ ಕಟೌಟ್ ಒಂದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿವಾದಕ್ಕೆ ಈಡುಮಾಡಿದೆ.

​ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ಈದ್ ಮಿಲಾದ್ ಆಚರಣೆಗಾಗಿ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್ ನಿಲ್ಲಿಸಲಾಗಿತ್ತು. ಈ ಕಟೌಟ್‌ನ ವೀಡಿಯೋ ಮಾಡಿ ಅದಕ್ಕೆ ಹಿನ್ನೆಲೆ ಸಂಗೀತವಾಗಿ ಪಾಕಿಸ್ತಾನದ ಮುಜಾಹಿದ್‌ಗೆ ಸಂಬಂಧಿಸಿದ ಹಾಗೂ ದೇಶವಿರೋಧಿ ಭಾವನೆ ಪ್ರಚೋದಿಸುವ ಹಾಡನ್ನು ಬಳಸಿ ಇನ್‌ಸ್ಟಾಗ್ರಾಮ್‌ನಲ್ಲಿ ಹರಿದುಬಡಲಾಗಿದೆ.

​’ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ (Chikkamagaluru Power Tippu Boys) ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ವೀಡಿಯೋವನ್ನು ಅಪ್‌ಲೋಡ್ ಮಾಡಲಾಗಿದ್ದು, ಪ್ರಸ್ತುತ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೇಶವಿರೋಧಿ ಹಾಡು ಬಳಸಿ ವೀಡಿಯೋ ಹಂಚಿಕೊಂಡಿರುವುದಕ್ಕೆ ಸ್ಥಳೀಯ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸೌಹಾರ್ದತೆ ಕದಡುವ ಯತ್ನ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.

​ಈ ಘಟನೆಯು ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ವೀಡಿಯೋ ಜಾಲತಾಣಗಳಲ್ಲಿ ಹರಡುತ್ತಿದ್ದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Join WhatsApp

Join Now

Join Telegram

Join Now

Leave a Comment