September 8, 2024

MALNAD TV

HEART OF COFFEE CITY

ಭಾರೀ ಮಳೆಗೆ ಬಿರುಕು ಬಿಡುತ್ತಿರುವ ಚಾರ್ಮಾಡಿ ರಸ್ತೆಯ ತಡೆಗೋಡೆಗಳು

1 min read

 

ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಅಲ್ಲಲ್ಲಿ ಅನಾಹುತಗಳು ಸಂಭವಿಸುತ್ತಿವೆ. ಈ ನಡುವೆ ಚಾರ್ಮಾಡಿ ಘಾಟಿಯಲ್ಲಿ ಕಳೆದ 2019 ರಲ್ಲಿ ಬಿದ್ದ ರಣಭೀಕರ ಮಳೆ ನಂತರ ನಿರ್ಮಾಣವಾಗಿದ್ದ ತಡೆಗೋಡೆಗಳು ಇದೀಗ ಕಳಪೆ ಕಾಮಗಾರಿಯಿಂದ ಬಿರುಕು ಬಿಟ್ಟಿವೆ.

ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ
ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟಿಯ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಅಪಾಯಕ್ಕೆ ಆಹ್ವಾನಿಸುತ್ತಿರುವ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯ ತಡೆಗೋಡೆಗಳು ಅಲ್ಲಲ್ಲಿ ಬಿರುಕು ಬಿಟ್ಟಿವೆ. ಮಳೆ ಹೆಚ್ಚಾದ ಬೆನ್ನಲ್ಲೇ ಬಿರುಕು ಬಿಟ್ಟಿರುವ ರಸ್ತೆಗಳು ಕುಸಿಯುವ ಭೀತಿ ಎದುರಾಗಿದೆ.
ಇತ್ತೀಚೆಗೆ ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ
2019ರ ಮಳೆಗೆ ಕುಸಿದಿದ್ದ ಜಾಗದಲ್ಲಿ ಕಾಮಗಾರಿ ನಡೆದಿತ್ತು, ಚಿಕ್ಕಮಗಳೂರು ವಿಭಾಗದ 4-5 ಸ್ಥಳಗಳಲ್ಲಿ ತಡೆಗೋಡೆ ಇದೀಗ ಬಿರುಕು ಬಿಟ್ಟಿದೆ, 100 ರಿಂದ 200 ಅಡಿ ಮಣ್ಣು ತುಂಬಿಸಿ ರಸ್ತೆ ಸಿರ್ಮಿಸಿದ ಜಾಗದಲ್ಲೇ ಬಿರುಕು ಕಾಣಿಸಿಕೊಂಡಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಅದ್ವಾನ ಕಂಡು ಸ್ಥಳಿಯರು, ಪ್ರಯಾಣಿಕರಲ್ಲಿ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರಿಗೆ ಅಪಾಯ ತಂದೊಡ್ಡುವಂತಿದೆ. ರಸ್ತೆ ನಿರ್ಮಾಣಕ್ಕೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಿಲ್ಲದಂತಾಗಿದೆ.
ಇದೊಂದು ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಕಳೆದ 2019 ರಲ್ಲಿ ಮಹಾ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಸಂಪೂರ್ಣ ಕುಸಿದಿತ್ತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!