ಚಿಕ್ಕಮಗಳೂರು : ಚಿಕ್ಕಮಗಳೂರಿನ ಬಿ.ಜಿ.ಎಸ್ ಎಕ್ಸ್ಪರ್ಟ್ಸ್ ಪದವಿಪೂರ್ವ ಕಾಲೇಜು 2025–26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ
ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡ್ನ ಆದಿಚುಂಚನಗಿರಿ ಬಡಾವಣೆಯಲ್ಲಿರುವ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಬಿಜಿಎಸ್ ಎಕ್ಸ್ಪರ್ಟ್ಸ್ ಪದವಿ ಪೂರ್ವ ಕಾಲೇಜಿನ ಎಚ್. ಜಿ. ತೃಪ್ತಿ ಅವರು 600ಕ್ಕೆ 592 ಅಂಕಗಳನ್ನು ಗಳಿಸಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಒಟ್ಟು 126 ವಿದ್ಯಾರ್ಥಿಗಳಲ್ಲಿ 45 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ , 73 ವಿದ್ಯಾರ್ಥಿಗಳು ಪ್ರಥಮ ದರ್ಜೆ, 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 73 ಪರೀಕ್ಷೆ ಬರೆದಿದ್ದು, 22 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 38 ವಿದ್ಯಾರ್ಥಿಗಳು ಪ್ರಥಮ ದರ್ಜೆ, 11 ವಿದ್ಯಾರ್ಥಿಗಳು ದ್ವಿತೀಯ ದರ್ಜೆ, ಒಬ್ಬ ವಿದ್ಯಾರ್ಥಿ ತೃತೀಯ ದರ್ಜೆ ಗಳಿಸಿದ್ದು, ವಿಜ್ಞಾನ ವಿಭಾಗದಲ್ಲಿ ಶೇಕಡಾ 96.03, ವಾಣಿಜ್ಯ ವಿಭಾಗದಲ್ಲಿ ಶೇಕಡಾ 98.63% ಶೇಡವಾರು ಗಳಿಸುವ ಮೂಲಕ ಬಿಜಿಎಸ್ ಎಕ್ಸ್ಪರ್ಟ್ಸ್ ಪದವಿ ಪೂರ್ವ ಕಾಲೇಜು ಶೇಕಡಾ 96.98% ಒಟ್ಟು ಪಲಿತಾಂಶ ಸಾಧನೆ ಮಾಡಿದೆ.
















Leave a Reply