ತೋಟದಲ್ಲಿ ಕೆಲಸ ಮಾಡುವಾಗ ಜೇನುನೊಣಗಳು ಕಚ್ಚಿ  – ರೈತ ಬಲಿ 

Spread the love

 

 

ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಜೇನು ನೊಣಗಳ ದಾಳಿಗೆ ರೈತರೊಬ್ಬರು ಬಲಿಯಾಗಿರುವ ದಾರುಣ ಘಟನೆ ನಡೆದಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ 61 ವರ್ಷದ ಕರಿಯಾನಾಯ್ಕ ಎಂಬುವವರ ಮೇಲೆ ಜೇನು ಹುಳಗಳು ಏಕಾಏಕಿ ದಾಳಿ ನಡೆಸಿದ್ದು, ಈ ವೇಳೆ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಸಖರಾಯಪಟ್ಟಣದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಈ ಘಟನೆಯಲ್ಲಿ ಕರಿಯಾನಾಯ್ಕ ಅವರ ಮಗ ಪ್ರದೀಪ್ ಅವರ ಮೇಲೂ ಜೇನು ಹುಳಗಳು ದಾಳಿ ಮಾಡಿದ್ದರೂ ಸಹ, ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *