मौसम क्रिकेट ऑपरेशन सिंदूर क्रिकेट स्पोर्ट्स बॉलीवुड जॉब - एजुकेशन बिजनेस लाइफस्टाइल देश विदेश राशिफल आध्यात्मिक अन्य
---Advertisement---

ಆಲ್ದೂರು ರಸ್ತೆಯ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಬಿಜೆಪಿ ಮಂಡಲದಿಂದ ಬೃಹತ್ ಪಾದಯಾತ್ರೆ

---Advertisement---

ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು-ಚಿಕ್ಕಮಗಳೂರು ಮುಖ್ಯ ರಸ್ತೆಯಲ್ಲಿ ಬಿದ್ದಿರುವ ಭಾರಿ ಪ್ರಮಾಣದ ಗುಂಡಿಗಳನ್ನು ತಕ್ಷಣವೇ ದುರಸ್ತಿ ಮಾಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಆಲ್ದೂರು ಬಿಜೆಪಿ ಮಂಡಲದಿಂದ ಬೃಹತ್ ಪಾದಯಾತ್ರೆ ನಡೆಸಿದರು.

​ತಾಲೂಕಿನ ಆಲ್ದೂರು ಗ್ರಾಮದಿಂದ ಚಾಲನೆ ಪಡೆದ ಈ ಪಾದಯಾತ್ರೆಯ ಆರಂಭಕ್ಕೂ ಮುನ್ನ, ಕಾರ್ಯಕರ್ತರು ರಸ್ತೆಯ ನಡುಭಾಗದಲ್ಲಿದ್ದ ಬೃಹತ್ ಗುಂಡಿಯೊಳಗೆ ಬಾಳೆಗಿಡ ನೆಡುವ ಮೂಲಕ ಆಡಳಿತಾರೂಢ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ವಿನೂತನವಾಗಿ ಆಕ್ರೋಶ ಹೊರಹಾಕಿದರು.

​ಶಾಸಕರ ವಿರುದ್ಧ ‘ಗುಂಡಿಗಳ ಸರದಾರರು’ ಎಂದು ವ್ಯಂಗ್ಯ

ಚಿಕ್ಕಮಗಳೂರು-ಆಲ್ದೂರು-ಬಾಳೆಹೊನ್ನೂರು-ಶೃಂಗೇರಿ ಸಂಪರ್ಕಿಸುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನ ಸವಾರರು ಪ್ರತಿದಿನ ಜೀವ ಕೈಯಲ್ಲಿಡಿದು ಸಂಚರಿಸುವಂತಾಗಿದೆ. ಈ ಭಾಗದ ಶಾಸಕರಾದ ರಾಜೇಗೌಡ ಹಾಗೂ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು, “ಶಾಸಕರು ರಸ್ತೆ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ‘ಗುಂಡಿಗಳ ಸರದಾರರು’ ಎನಿಸಿಕೊಂಡಿದ್ದಾರೆ” ಎಂದು ತೀವ್ರವಾಗಿ ವ್ಯಂಗ್ಯವಾಡಿದರು.

​”ಮಳೆಗಾಲ ಬಂದಾಗ ಬೇಸಿಗೆಯಲ್ಲಿ ಕೆಲಸ ಮಾಡುತ್ತೇವೆ ಎನ್ನುತ್ತಾರೆ, ಆದರೆ ಬೇಸಿಗೆ ಬಂದರೂ ಯಾವುದೇ ರಸ್ತೆ ದುರಸ್ತಿ ಕಾರ್ಯ ಕೈಗೊಂಡಿಲ್ಲ, ಎಂದು ಪ್ರತಿಭಟನಾಕಾರರು ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.

​18 ಕಿ.ಮೀ. ಸುದೀರ್ಘ ಪಾದಯಾತ್ರೆ

ಆಲ್ದೂರು ಹೋಬಳಿಯಿಂದ ಆರಂಭವಾದ ಈ 18 ಕಿಲೋಮೀಟರ್ ಪಾದಯಾತ್ರೆಯು ಚಿಕ್ಕಮಗಳೂರಿನ ಪ್ರಸಿದ್ಧ ಆಜಾದ್ ಪಾರ್ಕ್‌ನಲ್ಲಿ ಸಭಾ ಕಾರ್ಯಕ್ರಮದೊಂದಿಗೆ ಮುಕ್ತಾಯಗೊಳ್ಳಲಿದೆ. ನೂರಾರು ಬಿಜೆಪಿ ಕಾರ್ಯಕರ್ತರು ಮತ್ತು ಸ್ಥಳೀಯ ಸಾರ್ವಜನಿಕರು ಭಾಗವಹಿಸಿದ್ದು, ಶೀಘ್ರವೇ ರಸ್ತೆ ಡಾಂಬರೀಕರಣ ಮಾಡದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಈ ವೇಳೆ ಎಚ್ಚರಿಸಿದರು.

Join WhatsApp

Join Now

Join Telegram

Join Now

Leave a Comment