मौसम क्रिकेट ऑपरेशन सिंदूर क्रिकेट स्पोर्ट्स बॉलीवुड जॉब - एजुकेशन बिजनेस लाइफस्टाइल देश विदेश राशिफल आध्यात्मिक अन्य
---Advertisement---

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಚಿಕ್ಕಮಗಳೂರಿನಲ್ಲಿ 40ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

---Advertisement---

 

​ಚಿಕ್ಕಮಗಳೂರು: ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ (ಡಿ.ಸಿ) ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

​ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ನೂಕಾಟ-ತಳ್ಳಾಟ ನಡೆದಿತ್ತು. ಈ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸ್ ಇನ್ಸ್‌ಪೆಕ್ಟರ್ ಅಭಯ ಪ್ರಕಾಶ್ ಅವರು ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದೆ.

​ಪ್ರಕರಣದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ನಗರಾಧ್ಯಕ್ಷ ಪುಷ್ಪರಾಜ್, ಯುವ ಮೋರ್ಚಾದ ಸಂತೋಷ್ ಕೊಟ್ಯಾನ್ ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಹತ್ತಾರು ಬಿಜೆಪಿ ಮಹಿಳಾ ಕಾರ್ಯಕರ್ತರ ಹೆಸರನ್ನೂ ಸೇರಿಸಲಾಗಿದೆ.

Join WhatsApp

Join Now

Join Telegram

Join Now

Leave a Comment