ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಸೋಮವಾರ ಪ್ರಮುಖ ನಾಯಕರು ಬಿರುಸಿನ ಪ್ರಚಾರ ನಡೆಸಿದರು. ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಬೇವಿನಾಳ, ಇನಾಮಬೂದಿಹಾಳ ಹಾಗೂ ಹಿರೇಮಾಗಿ ಗ್ರಾಮಗಳಲ್ಲಿ ಮತಯಾಚಿಸಿ, ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಈ ಚುನಾವಣೆ ರಾಜ್ಯ ರಾಜಕಾರಣಕ್ಕೆ ಹೊಸ ದಿಕ್ಸೂಚಿಯಾಗಲಿದೆ ಎಂದರು. ವಿರೋಧ ಪಕ್ಷದ ನಾಯಕ ಆರ್. ಅಶೋಕ, ಶಾಸಕ ಸುನಿಲ್ ಕುಮಾರ್ ಕಾರ್ಕಳ ಹಾಗೂ ಜಿಲ್ಲಾಧ್ಯಕ್ಷ ಶಾಂತನಗೌಡ ಪಾಟೀಲ್ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.













Leave a Reply