🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಐದು ದಿನಗಳ ನಂತರ ಪತ್ತೆಯಾದ ಮೃತದೇಹ ! ಪತ್ನಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದ ಪತಿ

---Advertisement---

ಚಿಕ್ಕಮಗಳೂರು/ಬೇಲೂರು

 

ಅಕ್ರಮ ಸಂಬಂಧದ ಶಂಕೆ ಹಿನ್ನೆಲೆ ಪತ್ನಿಯನ್ನು ಕೊಲೆಗೈದು, ತನ್ನದೇ ತೋಟದಲ್ಲಿ ರಹಸ್ಯವಾಗಿ ಹೂತಿಟ್ಟಿದ್ದ ಪ್ರಕರಣ ಐದು ದಿನಗಳ ಬಳಿಕ ಬಯಲಾಗಿದೆ.

ಪತ್ನಿಯನ್ನು ಹತ್ಯೆಗೈದ ಬಳಿಕ ಮೃತದೇಹವನ್ನು ತೋಟದಲ್ಲೇ ಗುಂಡಿ ತೋಡಿ ಹೂತಿಟ್ಟಿದ್ದಾನೆ ಎಂಬುದು ಪೊಲೀಸರ ತೀವ್ರ ಹುಡುಕಾಟದ ನಂತರ ಗೊತ್ತಾಗಿದೆ 

ಮಾಹಿತಿಯ ಆಧಾರದ ಮೇಲೆ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹ ಹೂತಿಟ್ಟಿದ್ದ ಜಾಗವನ್ನು ಪತ್ತೆಹಚ್ಚಿ, ಮೃತದೇಹವನ್ನು ಹೊರತೆಗೆದಿದ್ದಾರೆ.

ಘಟನೆ ಸ್ಥಳದಲ್ಲಿ ಚಿಕ್ಕಮಗಳೂರಿನ ಬಸವನಹಳ್ಳಿ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಮಹಜರು ನಡೆಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಕೊಲೆ ಮಾಡಿ ತನ್ನದೆ ತೋಟದಲ್ಲಿ ಹೂತಿಟ್ಟು ರಘು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದ  

ಇದೀಗ ಐದು ದಿನಗಳ ನಂತರ ಮೃತದೇಹ ಪತ್ತೆಯಾಗಿದ್ದು ಪ್ರಕರಣದ ದುರಂತ ಅಂತ್ಯಕ್ಕೆ ಸಾಕ್ಷಿಯಾಗಿದೆ

Join WhatsApp

Join Now

Join Telegram

Join Now