मौसम क्रिकेट ऑपरेशन सिंदूर क्रिकेट स्पोर्ट्स बॉलीवुड जॉब - एजुकेशन बिजनेस लाइफस्टाइल देश विदेश राशिफल आध्यात्मिक अन्य
---Advertisement---

ಧರ್ಮಸ್ಥಳಕ್ಕೆ ಹೊರಟಿದ್ದ ಕಾರು ಲಾರಿಗೆ ಡಿಕ್ಕಿ; ಮೂವರು ಯುವಕರು ದಾರುಣ ಸಾವು, ಇಬ್ಬರ ಸ್ಥಿತಿ ಗಂಭೀರ

---Advertisement---

 

ಮೂಡಿಗೆರೆ: ಕ್ಷಣಾರ್ಧದಲ್ಲಿ ಸಂಭವಿಸಿದ ದಾರುಣ ಅಪಘಾತವೊಂದು ಐದು ಕುಟುಂಬಗಳ ಸಂತಸವನ್ನು ಕಸಿದುಕೊಂಡಿದೆ. ಧರ್ಮಸ್ಥಳಕ್ಕೆ ಹೊರಟಿದ್ದ ತುಮಕೂರು ಮೂಲದ ಯುವಕರಿದ್ದ ಕಾರು, ರಸ್ತೆ ಬದಿಯ ಲಾರಿಗೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟರೆ, ಇಬ್ಬರ ಸ್ಥಿತಿ ಅತ್ಯಂತ ಗಂಭೀರವಾಗಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ಮುಂಭಾಗ ನಿಲ್ಲಿಸಲಾಗಿದ್ದ ಸಿಲಿಂಡರ್ ಲಾರಿಗೆ, ವೇಗವಾಗಿ ಬಂದ ಕಾರು ನೇರವಾಗಿ ಡಿಕ್ಕಿಯಾಗಿದೆ. ಈ ಭೀಕರ ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಯುವಕರಾದ ಗುರುಕಿರಣ್ (28), ಮೋಹನ್ (30) ಹಾಗೂ ಜ್ಞಾನೇಶ್ (28) ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಅಪಘಾತದಲ್ಲಿ ತೀವ್ರ ರಕ್ತಸ್ರಾವಕ್ಕೊಳಗಾದ ಪ್ರೇಮ್ ಕುಮಾರ್ ಮತ್ತು ಹೃತಿಕ್ ಅವರ ಪರಿಸ್ಥಿತಿ ಗಂಭೀರವಾಗಿದ್ದು, ತಕ್ಷಣವೇ ಅವರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

 

Join WhatsApp

Join Now

Join Telegram

Join Now

Leave a Comment