🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೆ ಹೊತ್ತಿ ಉರಿದ ಕಾರು

---Advertisement---

 

 

 

ಎನ್.ಆರ್.ಪುರ: ತಾಲೂಕಿನ ಗುಬ್ಬಿಗಾ ಗ್ರಾಮದಲ್ಲಿ ನಿಲ್ಲಿಸಿದ್ದ ಕಾರೊಂದು ಆಕಸ್ಮಿಕ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಕಾಫಿ ತೋಟದ ಮೇಲ್ವಿಚಾರಕರಾದ ಜಾರ್ಜ್ ಎಂಬುವರಿಗೆ ಸೇರಿದ ಮಾರುತಿ 800 ಕಾರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣ ಭಸ್ಮವಾಗಿದೆ.

​ತೋಟದ ಕಾರ್ಮಿಕರನ್ನು ಕೆಲಸಕ್ಕೆ ಬಿಟ್ಟು ಬಂದ ಜಾರ್ಜ್ ಅವರು ತಮ್ಮ ಮನೆ ಮುಂದೆ ಕಾರನ್ನು ನಿಲ್ಲಿಸಿದ್ದರು. ಈ ವೇಳೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ವಾಹನವನ್ನು ಆವರಿಸಿಕೊಂಡಿದ್ದು, ವಾಹನವು ಕಣ್ಣೆದುರೇ ಸುಟ್ಟು ಕರಕಲಾಗಿದೆ. ಕಾರ್ಮಿಕರು ಕಾರಿನಲ್ಲಿದ್ದಾಗಲೇ ಈ ಘಟನೆ ನಡೆದಿದ್ದರೆ ದೊಡ್ಡ ಮಟ್ಟದ ಪ್ರಾಣಾಪಾಯ ಸಂಭವಿಸುವ ಸಾಧ್ಯತೆಯಿತ್ತು. ಆದರೆ ಕಾರ್ಮಿಕರನ್ನು ಇಳಿಸಿದ ಬಳಿಕವೇ ಈ ಅವಘಡ ಸಂಭವಿಸಿರುವುದರಿಂದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.

Join WhatsApp

Join Now

Join Telegram

Join Now