ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸಂಗಮೇಶ್ವರಪೇಟೆ ಸಮೀಪ ಖಾಸಗಿ ಬಸ್ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದ.
ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಖಾಸಗಿ ಬಸ್ ಎದುರು ಬರುತ್ತಿದ್ದ ವಾಹನಕ್ಕೆ ಸೈಡ್ ನೀಡಲು ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಆ ಸಂದರ್ಭದಲ್ಲಿ ಮಳೆಯ ಕಾರಣದಿಂದ ರಸ್ತೆ ಜಾರಿ ಹೋಗಿದ್ದರಿಂದ ಬಸ್ ಟೈರ್ ಸ್ಕಿಡ್ ಆಗಿ ಚಾಲಕನ ನಿಯಂತ್ರಣ ತಪ್ಪಿದೆ
ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ ಮುರಿದು ಬಸ್ ಮೇಲೆಯೇ ಬಿದ್ದಿದೆ. ಬಸ್ ಕಂಬಕ್ಕೆ ಡಿಕ್ಕಿ ಹೊಡೆದ ತಕ್ಷಣ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಘಟನೆ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
















Leave a Reply