🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಕಾರು ಡಿಕ್ಕಿ ಹೊಡೆದು ಕಾಫಿ ಕ್ಯೂರಿಂಗ್ ವಾಚ್ ಮ್ಯಾನ್ ಸ್ಥಳದಲ್ಲೇ ಸಾವು!

---Advertisement---

ಚಿಕ್ಕಮಗಳೂರು: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ, ವೃದ್ಧರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಮುಗುಳುವಳ್ಳಿ ಗ್ರಾಮದ ಸಮೀಪ ನಡೆದಿದೆ.

​ಉಡುಪಿ ಮೂಲದ ಕೃಷ್ಣಪ್ಪ (62) ಮೃತಪಟ್ಟ ದುರ್ದೈವಿ. ಇವರು ಸ್ಥಳೀಯ ಕಾಫಿ ಕ್ಯೂರಿಂಗ್ ಒಂದರಲ್ಲಿ ವಾಚ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಎಂದಿನಂತೆ ರಾತ್ರಿ ಊಟ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

​ಬಾಳೆಹೊನ್ನೂರಿನಿಂದ ಬೆಂಗಳೂರು ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ಕೃಷ್ಣಪ್ಪ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Join WhatsApp

Join Now

Join Telegram

Join Now